ಬೆಂಗಳೂರು : ಬೆಂಗಳೂರು ಹೊರವಲಯದಲ್ಲಿ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಇದೀಗ ಪ್ಲಾನ್ ಮಾಡಿಕೊಂಡಿದ್ದು ರೈತರ ಸಾವಿರಾರು ಎಕರೆ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಪ್ಲಾನ್ ಮಾಡಿದೆ. ಕರ್ನಾಟಕ ಗೃಹ ಮಂಡಳಿಗೆ ರೈತರ ಕೃಷಿ ಭೂಮಿ ಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಂಡಿದೆ. 2760 ಎಕರೆ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ನಡೆ ಖಂಡಿಸಿ ರೈತರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ದೊಡ್ಡ ಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನಕ್ಕೆ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ದೊಡ್ಡಹೆಜ್ಜೆ, ವೆಂಕಟೇಶಪುರ, ಸೇರಿದಂತೆ ಒಟ್ಟು 2760 ಎಕರೆ ಭೂಸ್ವಾಧೀನಕ್ಕೆ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೃಷಿ ಭೂಮಿ ಸ್ವಾಧೀನ ಖಂಡಿಸಿ 5 ಗ್ರಾಮಗಳ ರೈತರು ಸಮಾವೇಶ ನಡೆಸುತ್ತಿದ್ದಾರೆ. ಚಿಕ್ಕ ಬೆಳವಂಗಲದಿಂದ ದೊಡ್ಡ ಬೆಳವಂಗದವರೆಗೆ ರೈತರು ಬೃಹತ್ ಪಾದಯಾತ್ರೆ ಕೈಗೊಂಡಿದ್ದಾರೆ. ಕರ್ನಾಟಕ ಗೃಹ ಮಂಡಳಿ ನೋಟಿಸ್ ಗಳನ್ನು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಟೌನ್ಶಿಪ್, ಕ್ವೀನ್ ಸಿಟಿ ಹಾಗೂ ಕೆಐಎಡಿಬಿಗೆ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು ರೈತರ 10,000 ಎಕರೆ ಕೃಷಿ ಭೂಮಿ ರಾಜ್ಯ ಸರ್ಕಾರದ ಪಾಲಾಗಿದೆ. ಇದೀಗ ಮತ್ತೆ ಗ್ರಹ ಮಂಡಳಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ ಯಾವುದೇ ಕಾರಣಕ್ಕೂ ನಮ್ಮ ಭೂಮಿಯನ್ನು ಬಿಡುವುದಿಲ್ಲ. ಪ್ರಾಣ ಬೇಕಾದರೂ ಬಿಡುತ್ತೇವೆ ಭೂಮಿ ಬಿಡಲ್ಲ ಅಂತ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.