ಬೆಂಗಳೂರು : ಬೆಂಗಳೂರಿನ ಬೇಗೂರಿನಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಸಿಲಿಂಡರ್ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಸ್ಕ್ರಾಪ್ ಗೋ Lದಾಮಿಗೆ ಬೆಂಕಿ ಹೊತ್ತಿಕೊಂಡಿದೆ. ಗೋದಾಮಿನಲ್ಲಿ ಇದ್ದಂತಹ ಪ್ಲಾಸ್ಟಿಕ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ದಟ್ಟವಾದ ಹೊಗೆಯಿಂದ ಇಡೀ ಏರಿಯಾವನ್ನು ಆವರಿಸಿದೆ. ಬೇಗೂರಿನ ಅಕ್ಷಯ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ ಅಗ್ನಿಶಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಬೆಳಿಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿದ್ದು, ಮೂರು ಅಗ್ನಿಶಾಮಕ ವಾಹನ ದೌಡಯಿಸಿವೆ. 20ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಂಕಿ ನಂದಿಸುವಲಿ ನಿರತರಾಗಿದ್ದಾರೆ. ಮೊದಲಿಗೆ ಸಿಲಿಂಡರ್ ಬ್ಲಾಸ್ಟ್ ನಿಂದ ಈ ಒಂದು ಅಗ್ನಿ ಅವಗಡ ಸಂಭವಿಸಿದೆ.
ಪ್ಲಾಸ್ಟಿಕ್ ಗೋದಾಮು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಸುಮಾರು 2 ಗಂಟೆಗಳ ಕಾಲ ಬೆಂಕಿ ನಂದಿಸುತ್ತಿದ್ದರು, ಬೆಂಕಿ ತಹ ಬದಿಗೆ ಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.