ಶಿವಮೊಗ್ಗ: ಕಳೆದ ಅಕ್ಟೋಬರ್.5, 2025ರಂದು ಶಿವಮೊಗ್ಗದ ಆರ್.ಎಂ.ಎಲ್ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ನಡೆಸಿದ ದಾಳಿಯಲ್ಲಿ, ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಸ್ಕ್ರ್ಯಾಪ್ ವ್ಯಾಪಾರಿ ಅಮ್ಜದ್(34) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಐವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಇವರಲ್ಲಿ ಕೆಲವರು ಅಪ್ರಾಪ್ತ ವಯಸ್ಸಿನವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.