ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಮಾರಣಾಂತಿಕ ಹಲ್ಲೆ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು. ಈ ಘಟನೆ ಹಸಿಯಾಗಿರೋ ಮುನ್ನವೇ, ಇಂದು ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರಿಗೆ ಚಾಕುವಿನಿಂದ ಇರಿದಿರುವಂತ ಆಘಾತಕಾರಿ ಘಟನೆ ನಡೆದಿದೆ.
ಶಿವಮೊಗ್ಗದ ತುಂಬಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಊರಗಡೂರಿನಲ್ಲಿ ಇಬ್ಬರ ಮೇಲೆ ಹಾಡ ಹಗಲೇ ಮಾರಣಾಂತಿಕವಾಗಿ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವಂತ ಘಟನೆ ನಡೆದಿದೆ.
ಶಬ್ಬೀರ್ ಹಾಗೂ ಶಬಾಜ್ ಎಂಬುವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಭಾವನನ್ನೇ ಗಂಭೀರವಾಗಿ ಗಾಯಗೊಳಿಸಲಾಗಿದೆ. ಫದ್ರೀನ್ ಹಾಗೂ ಆತನ ಸಹೋದರರು, ಸ್ನೇಹಿತರೊಂದಿಗೆ ಸೇರಿ ಶಬ್ಬೀರ್ ಹಾಗೂ ಶಬಾಜ್ ಗೆ ಚಾಕುವಿನಿಂದ ಇರಿಯಲಾಗಿದೆ.
ಈ ವಿಷಯ ತಿಳಿದು ಸ್ಥಳದ್ದೆ ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಕಾರಿಯಪ್ಪ, ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಗುರುರಾಜ್ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.