ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ವಯೋಮಿತಿ ಸಡಿಲಿಕೆ ಮಾಡುವ ಕುರಿತಂತೆ ಈಗಾಗಲೇ ಬೇರೆ ರಾಜ್ಯಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದೇವೆ, ಶೀಘ್ರವೇ ಪೊಲೀಸ್ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಇನ್ನೂ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ದಿನಾಂಕ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಮುಖ್ಯಮಂತ್ರಿಗಳು ಕೊಪ್ಪಳದಿಂದ ವಾಪಸ್ ಆದ ಬಳಿಕ ಅಧಿಕಾರಗಳೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಸಮೀಕ್ಷೆ ಪ್ರಗತಿ ಶೇ. 70-80ರಷ್ಟಾಗಿದೆ. ತಾಂತ್ರಿಕ ಹಾಗೂ ಗಣತಿದಾರರ ಗೊಂದಲದಿಂದ ಸ್ವಲ್ಪ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.