ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಗಂಡನೇ ಕೊಚ್ಚಿ ಕೊಂದ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಗಂಡನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಗಂಡ ಸಂಗಪ್ಪ ಪತ್ನಿ ಮಾರಮ್ಮನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.
ಒಂದು ವರ್ಷದಿಂದ ತವರು ಮನೆಯಲ್ಲಿದ್ದ ಮಾರಮ್ಮ ಎರಡು ದಿನಗಳ ಹಿಂದೆ ಗಂಡನ ಮನೆಗೆ ಬಂದಿದ್ದಳು. ಈ ವೇಳೆ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಸಂಗಪ್ಪ ಕೊಚ್ಚಿ ಕೊಲೆ ಮಾಡಿದ್ದಾನೆ.