ಬೆಂಗಳೂರು : ಮುಡಾ ಹಗರಣದಲ್ಲಿ 440 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಅಕ್ರಮವಾಗಿ ನೀಡಿದ್ದ 252 ನಿವೇಶನಗಳನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತಿಳಿಸಿದೆ.
ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿ ಇಡಿ ಅಧಿಕಾರಿಗಳು 32 ಸೈಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 40.8 ಕೋಟಿ ರೂ.ಮೌಲ್ಯದ ನಿವೇಶಗಳನ್ನೂ ಇಡಿ ವಶಕ್ಕೆ ಪಡೆದುಕೊಂಡಿದೆ.
ಅಕ್ರಮವಾಗಿ 252 ಸೈಟ್ ಗಳನ್ನು ಅಧಿಕಾರಿಗಳು ಅಲಾಟ್ ಮಾಡಿದ್ದರು. ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತು, ದಿನೇಶ್ ಬಳಿ 32 ನಿವೇಶಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ ಮುಡಾ ಮಾಜಿ ಆಯುಕ್ತ ದಿನೇಶ್ ಆಸ್ತಿ ಮಾಡಿದ್ದರು.