ಕೊಪ್ಪಳ : ಸನ್ಮಾನದ ವೇಳೆ ಸಿಎಂ ಸಿದ್ದರಾಮಯ್ಯ ಪೇಟ ಧರಿಸಲು ನಿರಾಕರಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಈ ಒಂದು ಘಟನೆ ನಡೆದಿದ್ದು, ಕೊಪ್ಪಳದ ಹೊಸಪೇಟೆ ರಸ್ತೆಯಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಸನ್ಮಾನದ ವೇಳೆ ಸಿಎಂ ಸಿದ್ದರಾಮಯ್ಯಗೆ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಶಾಸಕ ಹಿಟ್ನಾಳ್ ಪೇಟಾ ಹಾಕಲು ಹೋದಾಗ, ಸಿದ್ದರಾಮಯ್ಯ ಪೇಟಾ ಬೇಡ ಅಂತ ನಿರಾಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದರು.