ಕೊಪ್ಪಳ : ಬಿಜೆಪಿ ಒಂದೆ ಒಂದು ಮನೆ ಕೊಟ್ಟಿದ್ರೆ ರಾಜೀನಾಮೆ ಕೊಡುತ್ತೇನೆ ಎಂದು ಕೊಪ್ಪಳದಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ. ಧಮ್ಮು, ತಾಕತ್ತು ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡುತ್ತಾರೆ. ನಾನು ಬಿಜೆಪಿ ನಾಯಕರಿಗೆ ಓಪನ್ ಚಾಲೆಂಜ್ ಹಾಕುತ್ತೇನೆ ಒಂದೇ ಒಂದು ಮನೆ ಕೊಟ್ಟಿದ್ದು ಸಾಬೀತು ಮಾಡಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ. ಇಂದು ಸಂಜೆ ರಾಜ್ಯಪಾಲರಿಗೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು.
ಕೊಪ್ಪಳದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿಯವರದು ಬರೀ ಸುಳ್ಳು. ಈ ಹಿಂದೆ ಹೆಗಡೆ ಸಂವಿಧಾನ ಬದಲಾವಣೆ ಮಾಡುತ್ತೇನೆ ಅಂದಿದ್ದರು. ಅಂಬೇಡ್ಕರ್ ಸಂವಿಧಾನ ಕೊಟ್ಟಿದ್ದಕ್ಕೆ ನಾವು ಇಲ್ಲಿ ಕುಳಿತಿದ್ದೇವೆ. ಸಿಎಂ ಸಿದ್ದರಾಮಯ್ಯ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದಾರೆ ಎಂದರು.