ಹಾಸನ : ಹಾಸನದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು, ಕಟ್ಟಡಕ್ಕೆ ವಿದ್ಯುತ್ ದೀಪಾಲಂಕಾರ ಮಾಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನಪ್ಪಿದ್ದಾರೆ. ಹಾಸನದ ಮಲಬಾರ್ ಗೋಲ್ಡ್ ಕಟ್ಟಡದಿಂದ ಬಿದ್ದು ಸಿಬ್ಬಂದಿ ಸಾವನಪ್ಪಿದ್ದಾರೆ.
ಹಾಸನ ಜಿಲ್ಲೆಯ ಆಲೂರು ಮೂಲದ ರವೀಂದ್ರ (55) ಕಟ್ಟಡಕ್ಕೆ ವಿದ್ಯುತ್ ದೀಪ ಅಲಂಕಾರ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ.ಮಲಬಾರ್ ಗೋಲ್ಡ್ ನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದ ರವೀಂದ್ರ ಇಂದ್ರ ಕಳೆದ 14 ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಕಟ್ಟಡಕ್ಕೆ ವಿದ್ಯುತ್ ದೀಪ ಅಲಂಕಾರ ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಘಟನೆ ಕುರಿತಂತ್ವ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.