ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಹೋಟೆಲ್ನಲ್ಲಿ ಸಿಲಿಂಡರ್ ಸೋರಿಕೆಯಾಗಿ ಅಗ್ನಿ ದುರಂತ ಸಂಭವಿಸಿದೆ. ಬೆಂಗಳೂರಿನ ಸುಧಾಮ ನಗರದಲ್ಲಿ ಈ ಒಂದು ಘಟನೆ ನಡೆದಿದ್ದು ಸಂಜೆ 4 ಗಂಟೆಗೆ ಹೋಟೆಲ್ ಅನ್ನು ಸಿಬ್ಬಂದಿಗಳು ಬಂದ್ ಮಾಡಿದ್ದಾರೆ.
ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ ಹೋಟೆಲ್ ನಲ್ಲಿ ಯಾರು ಇಲ್ಲದ್ದರಿಂದ ಭಾರಿ ಅನಾಹುತ ಒಂದು ತಪ್ಪಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.