ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಬಸ್ ಹರಿದು ಮೂವರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಸ್ಲೀಪರ್ ಬಸ್ ಹರಿದು ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಮೃತರನ್ನು ಅನ್ನಪೂರ್ಣ(40), ಪ್ರಕಾಶ್(25) ಶರಣಪ್ಪ(19) ಎಂದು ಗುರುತಿಸಲಾಗಿದೆ. ಮೃತರು ಗದಗ ಜಿಲ್ಲೆ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದಾರೆ.
ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಹೋಗುತ್ತಿದ್ದರು. ಈ ವೇಳೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ. ಮೂವರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊಪ್ಪಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.