ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದ್ದು ಈ ಹಿನ್ನಲೆಯಲ್ಲಿ ಸಮೀಕ್ಷೆಯನ್ನು ಪೂರ್ಣಗೊಳ್ಳದ ಕಾರಣದಿಂದ ಸಮೀಕ್ಷೆಯನ್ನು ಅಕ್ಟೋಬರ್ 12 ರವರೆಗೆ ವಿಸ್ತರಣೆ ಮಾಡಲಾಗಿದ್ದು ಅಲ್ಲದೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬ ರಜೆಯನ್ನು ಅಕ್ಬರ್ 18 ರವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಇನ್ನೊಂದು ಕಡೆಗೆ ದ್ವಿತೀಯ ಪಿಯುಸಿ ಮಧ್ಯಂತರ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೆಗೆ ಬರುವಂತಿಲ್ಲ. ಬೆಂಗಳೂರಿನಲ್ಲಿ 6700 ಜನ ಟೀಚರ್ಸ್ ಸರ್ವೆಯಲ್ಲಿ ಭಾಗಿಯಾಗಿದ್ದು, ಒಟ್ಟು ಬೆಂಗಳೂರಿನಲ್ಲಿ 27 ಸಾವಿರ ಗಣಿತದಾರರು ಇದ್ದಾರೆ. ಬೆಂಗಳೂರಿನಲ್ಲಿ 46 ಲಕ್ಷ ಮನೆಗಳು ಇವೆ. ಹಾಗಾಗಿ ಪರೀಕ್ಷೆಯಲ್ಲಿ ತೊಡಗಿಸಿಕೊಂಡವರು ಸರ್ವೇಗೆ ಬರುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಕ್ಟೋಬರ್ 18 ರವರೆಗೆ ರಜೆ ವಿಸ್ತರಿಸಲಾಗಿದೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದ್ದು, ಖಾಸಗಿ ಶಾಲೆಗಳಿಗೆ ರಜೆ ವಿಸ್ತರಣೆ ಅನ್ವಯ ಆಗುವುದಿಲ್ಲ. ರಜೆ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಸಮೀಕ್ಷೆಯಲ್ಲಿ 1. 20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ ಪೂರ್ಣ ಕೆಲಸ ಆಗಬೇಕು ಅಂದರೆ ರಜೆ ವಿಸ್ತರಿಸುವಂತೆ ಕೇಳಿದ್ದಾರೆ. ಹಾಗಾಗಿ ನಾಳೆಯಿಂದ ಅಕ್ಟೋಬರ್ 18 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.








