ಬೆಂಗಳೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾಗಿರುವ ಎಚ್ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದೇವೇಗೌಡರು ದಾಖಲಾಗಿದ್ದಾರೆ.
ಹೌದು ಇಂದು ಎಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡು ಬಂದಿತ್ತು. ತಕ್ಷಣ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಚಿಕಿತ್ಸೆಯ ಬಳಿಕ ಎಚ್ ಡಿ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.