ಹಾಸನ : ಅಕ್ಟೋಬರ್ 9ರಿಂದ ಹಾಸನಾಂಬೆ ಉತ್ಸವ ಆರಂಭವಾಗಲಿದೆ ಅಕ್ಟೋಬರ್ 15ರಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಕಳೆದ ವರ್ಷ 20 ಲಕ್ಷ ಭಕ್ತರು ಹಾಸನಾಂಬೆ ದರ್ಶನಕ್ಕೆ ಬಂದಿದ್ದರು. ಈ ವರ್ಷ 25 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ ಎಂದು ಹಾಸನದಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ ನೀಡಿದರು.
ಹಾಸನ ಜಿಲ್ಲಾ ಆಡಳಿತದಿಂದ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿನಿತ್ಯ ಒಂದರಿಂದ ಒಂದುವರೆ ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ. ವಿಐಪಿ ಗಳಿಗೆ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ವಿಐಪಿ ಗಳು ಬಂದಾಗ ಸಾಮಾನ್ಯ ಭಕ್ತರ ದರ್ಶನಕ್ಕೆ ಅಡ್ಡಿ ಆಗುವುದಿಲ್ಲ. ಜಾನಪದ ಜಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮ, ಫಲ ಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಆಹಾರ ಮೇಳ, ಟೂರಿಸಂ ಮೇಳ ಹೀಗೆ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ವಿಶೇಷ ಚೇತನರು 80 ವರ್ಷ ಮೇಲ್ಪಟ್ಟವರಿಗೆ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪೊಲೀಸರು ಬಂದೋಬಸ್ತ್ ಕೈಗೊಳ್ಳುತ್ತಾರೆ. ಇಬ್ಬರು ಎಸ್ಪಿ ನೇತೃತ್ವದಲ್ಲಿ 1500 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಹಾಸನಾಂಬೆ ದರ್ಶನಕ್ಕೆ ಬರುವವರೆಗೆ ವಿಶೇಷ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದರು.