ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವಂತ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ.
ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವಂತ ಜಾಲಿವುಡ್ ಸ್ಟುಡಿಯೋಸ್ ಗೆ ರಾಮನಗರ ತಹಶೀಲ್ದಾರ್, ಪೊಲೀಸರು ಭೇಟಿ ನೀಡಿದ್ದರು. ಜಾಲಿವುಡ್ ಸ್ಟುಡಿಯೋಸ್ ಒಳಗೆ ಪ್ರವೇಶಿಸಿದಂತ ತಹಶೀಲ್ದಾರ್, ಒಳಗೆ ಇರುವವರನ್ನು ಹೊರ ಕಳುಹಿಸುವಂತೆ ಸೂಚಿಸಿದ್ದರು.
ಈ ಬಳಿಕ ರಾಮನಗರ ತಹಶೀಲ್ದಾರ್, ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ನಡೆಯುತ್ತಿರುವಂತ ಜಾಲಿವುಡ್ ಸ್ಟುಡಿಯೋಸ್ ಗೆ ಬೀಗವನ್ನು ಜಡಿಯಲಾಗಿದೆ. ಜಾಲಿವುಡ್ ಸ್ಟುಡಿಯೋಸ್ ಮತ್ತು ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಟೆಡ್ ಗೆ ಬೀಗಮುದ್ರೆಯನ್ನು ಹಾಕಲಾಗಿದೆ. ಹೀಗಾಗಿ ಕನ್ನಡದ ಖ್ಯಾತ ಶೋ ಬಿಗ್ ಬಾಸ್ ಎರಡೇ ವಾರಕ್ಕೆ ಸ್ಥಗಿತಗೊಳ್ಳಲಿದ್ಯಾ ಎಂಬ ಅನುಮಾನವನ್ನು ಹುಟ್ಟು ಹಾಕಿದೆ.
ಶಿಕ್ಷಕರ ಸಂಘದ ಮನವಿ ಮೇರೆಗೆ 10 ದಿನಗಳ ಕಾಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ: ಡಿಸಿಎಂ ಡಿ.ಕೆ. ಶಿವಕುಮಾರ್
BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ