ಬೆಂಗಳೂರು: ಸೆಪ್ಟೆಂಬರ್ 20ರಿಂದ ಅ.8ರವರೆಗೆ ಶಾಲಾ ಮಕ್ಕಳಿಗೆ ನೀಡಿದ್ದ ‘ದಸರಾ ರಜೆ’ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಖಾಸಗಿ ಶಾಲೆಗಳು ಪುನಾರಂಭಗೊಳ್ಳಲಿದೆ.
ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿಗಣತಿಯಲ್ಲಿ ಖಾಸಗಿ ಶಾಲೆಯ ಸಿಬ್ಬಂದಿ ಭಾಗವಹಿಸದ ಹಿನ್ನೆಲೆಯಲ್ಲಿ, ಪೂರ್ವ ನಿಗದಿಯಂತೆ ಇಂದಿನಿಂದ ರಾಜ್ಯಾದ್ಯಂತ ಖಾಸಗಿ ಶಾಲೆಗಳು ಪುನಾರರಂಭವಾಗಲಿವೆ ಎಂದು ಕೃಪಾ ಸಂಘಟನೆ ಸ್ಪಷ್ಟನೆ ನೀಡಿದೆ.
ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ಅ.8ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 18 ದಿನಗಳ ಕಾಲ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಸಿಕ್ಕಿತ್ತು. ರಾಜ್ಯದಲ್ಲಿ ಜಾತಿಗಣತಿ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ದಸರಾ ರಜೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.