ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಇಂದೇ ತುರ್ತು ವಿಚಾರಣೆ ಮಾಡುವಂತೆ ಅರ್ಜಿದಾರರ ಪರವಾಗಿ ವಕೀಲರು ಮನವಿ ಮಾಡಿದ್ದಾರೆ ಹಾಗಾಗಿ ಮಧ್ಯಾಹ್ನ 2:30 ನಂತರ ಹೈಕೋರ್ಟ್ ಅಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಈ ಒಂದು ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಇಂದು ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸಿದೆ.
ಇನ್ನು ಅರ್ಜಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲಿ ಆದೇಶ ಹೊರಡಿಸಲಾಗಿದೆ. ತಮ್ಮ ಅಹವಾಲು ಆಲಿಸದೆ ತರಾತುರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಮಾಲಿನ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶವಿದೆ ಎಂದು ಅರ್ಜಿಯಲ್ಲಿ ವೆಲ್ಸ್ ಸ್ಟುಡಿಯೋ ಆರೋಪಿಸಿದೆ.