ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು.
ಇದೀಗ ವೆಲ್ಸ್ ಸ್ಟುಡಿಯೋಸ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಲ್ಲ ಸರಿಪಡಿಸಿಕೊಳ್ಳಲು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ.
ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ 2 ಗಂಟೆ ಒಳಗೆ ಬಿಗ್ ಬಾಸ್ ಎಲ್ಲ ಸ್ಪರ್ಧೆಗಳು ಮತ್ತೆ ಮನೆಗೆ ಎಂಟ್ರಿ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.