ಬೆಂಗಳೂರು: ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಅಪ್ ಡೇಟ್ ನೀಡಲಾಗಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABArK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ (referral) ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ.
ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳು ವ್ಯಾಪಕವಾಗಿ ಲಭ್ಯವಿರುವುದರಿಂದ ಇವುಗಳ ಬಳಕೆಯ ಅವಕಾಶದಿಂದ ಯಶಸ್ವಿನಿ ಯೋಜನೆಯ ಫಲಾನುಭವಿಗಳು ವಂಚಿತವಾಗಬಾರದೆಂದು ಮನಗಂಡು, ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ABARK ಅಡಿಯಲ್ಲಿ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಮುಂದುವರೆಯುತ್ತದೆ. ಆದರೆ, SAST ಅಂತಹ ಎಲ್ಲಾ ಫಲಾನುಭವಿಗಳ ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ABArK ದರದಲ್ಲಿ ಚಿಕಿತ್ಸಾ ವೆಚ್ಚವನ್ನು ಮರುಪಾವತಿಸಲು ಕ್ಲಮ್ ಅನ್ನು ಸಲ್ಲಿಸುವುದು ಅಂತ ಹೇಳಿದೆ.
ಇದಲ್ಲದೆ, SAST ಕಳೆದ ವರ್ಷದಲ್ಲಿ 3.07 ಲಕ್ಷ ಯಶಸ್ವಿನಿ ಫಲಾನುಭವಿಗಳಿಗೆ ABArK ಅಡಿಯಲ್ಲಿ ಪಾವತಿಸಲಾದ ರೂ.130.22 ಕೋಟಿ ಮೊತ್ತವನ್ನು ಸಹಕಾರ ಇಲಾಖೆಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮರುಪಾವತಿಸಿಕೊಳ್ಳಲು ಮಾಹಿತಿಯನ್ನು ಸಹಕಾರ ಇಲಾಖೆಯೊಂದಿಗೆ ಹಂಚಿಕೊಳ್ಳುವುದು.
ಈ ವ್ಯವಸ್ಥೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾರ್ಯಗತಗೊಳಿಸಲು SAST ಗೆ ಸೂಚಿಸಲಾಗಿದ್ದು, ಹಾಗೂ ಈ ಆದೇಶವನ್ನು ಅನುಷ್ಠಾನಗೊಳಿಸಲು ಏನಾದರು ಸಾಧಕ- ಬಾಧಕಗಳಿದ್ದಲ್ಲಿ ತಕ್ಷಣವೇ ಸರ್ಕಾರದ ಗಮನಕ್ಕೆ ತರುವಂತೆ ಸೂಚಿಸಲಾಗಿದೆ.
‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್
BREAKING : ಬೆಂಗಳೂರಲ್ಲಿ 23 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ವಿದೇಶಿ ಪ್ರಜೆ ಸೇರಿ 6 ಆರೋಪಿಗಳು ಅರೆಸ್ಟ್