ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಬರ್ತಡೇ ಆಚರಿಸಿಕೊಂಡಿದ್ದು ಬಾರಿ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪದ ಕಾರಣ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಆದೇಶಿಸಿದ್ದಾರೆ.
ಕಳೆದ ಸೆಪ್ಟೆಂಬರ್.9ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಬರ್ತಡೇ ಆಚರಿಸಿಕೊಂಡಿದ್ದರು. ಇದು ಜೈಲು ಅಧಿಕಾರಿಗಳ ಕರ್ತವ್ಯ ಲೋಪವನ್ನು ಎತ್ತಿ ತೋರಿಸಿದಂತಿತ್ತು.
ಈ ಹಿನ್ನಲೆಯಲ್ಲಿ ಜೈಲು ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಭೀತಾಗಿತ್ತು. ಹೀಗಾಗಿ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿ ಕಾರಾಗೃಹ ಎಡಿಜಿಪಿ ಬಿ.ದಯಾನಂದ್ ಆದೇಶಿಸಿದ್ದಾರೆ.
ಬಿಇಎಲ್ ನಲ್ಲಿ ಟ್ರೈನಿ ಇಂಜಿನಿಯರುಗಳ ನೇಮಕಾತಿಯನ್ನು ಮರು ಪರಿಶೀಲಿಸಿ: ಕೇಂದ್ರ ರಕ್ಷಣಾ ಸಚಿವರಿಗೆ ಬಿಳಿಮಲೆ ಆಗ್ರಹ
ನಾಳೆ ಸಿಎಂ, ಡಿಸಿಎಂ ರಾಜ್ಯದ 525 ಗ್ರಾಮ ಪಂಚಾಯ್ತಿಗಳಲ್ಲಿ ನೀರಿದ್ದರೆ ನಾಳೆ ಯೋಜನೆಗೆ ಚಾಲನೆ: ಸಚಿವ ಎನ್.ಎಸ್ ಭೋಸರಾಜು