ಬೆಂಗಳೂರು: ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ.
ಇಂದು ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಿ ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕುವ ಉದ್ದೇಶದಿಂದ “ನೀರಿದ್ದರೆ ನಾಳೆ” ಎನ್ನುವ ವಿನೂತನ ಕಾರ್ಯಕ್ರಮವನ್ನು ರೂಪಿಸಲಾಗಿದೆ. “ನೀರಿದ್ದರೆ ನಾಳೆ” ಎನ್ನುವ ವಿಶೇಷ ಪರಿಕಲ್ಪನೆಯ ಕಾರ್ಯಕ್ರಮದ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲ ಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರಿಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದರು.
ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ನಾಳೆ ಚಾಲನೆ… pic.twitter.com/odJ1JE4mlF
— DIPR Karnataka (@KarnatakaVarthe) October 8, 2025
ಮೊದಲ ಹಂತದಲ್ಲಿ ರಾಜ್ಯದ 16 ಜಿಲ್ಲೆಗಳ 27 ತಾಲ್ಲೂಕುಗಳ 525 ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಅತಿಬಳಕೆ ಗ್ರಾಮ ಪಂಚಾಯತಿಗಳಿವೆ ಎಂದರು.
ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಶಿಷ್ಟ ಸಿಂಹ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ. ನಾಳೆ ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ರಾಜ್ಯದಲ್ಲಿ ಅಂತರ್ಜಲ ಸಾಕ್ಷರತೆಗೆ ಒತ್ತು ನೀಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ: ಸಚಿವ ಪ್ರಿಯಾಂಕ್ ಖರ್ಗೆ
‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್