Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಇನ್ಮುಂದೆ GBA ಪಾಲಿಕೆಗಳಲ್ಲಿ ಶೇ.50ರಷ್ಟು ಮಹಿಳಾ ಕಾರ್ಪೊರೇಟರ್ ಇರುತ್ತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0908/10/2025 7:39 PM

ಬೆಂಗಳೂರು : “ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಅನ್ನು ಮಹಿಳೆಯರಿಗೆ ನೀಡಲಾಗುವುದು. ಆಮೂಲಕ ಮುಂದಿನ ದಿನಗಳಲ್ಲಿ ಬೆಂಗಳೂರಿನ ಪಾಲಿಕೆಗಳಲ್ಲಿ ಅರ್ಧದಷ್ಟು ಮಹಿಳಾ ಕಾರ್ಪೊರೇಟರ್ ಗಳು ಇರುತ್ತಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿಯು (B.PAC) ಮೌಂಟ್ ಕಾರ್ಮೆಲ್ ಕಾಲೇಜು ಸಹಯೋಗದಲ್ಲಿ ಕಾಲೇಜು ಆವರಣದಲ್ಲಿ ಬುಧವಾರ ಬೆಂಗಳೂರು ಅಭಿವೃದ್ಧಿ, ಪರಿವರ್ತನೆ ಕುರಿತು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.

ಹಲವಾರು ದಶಕಗಳಿಂದ ಬೆಂಗಳೂರಿನಲ್ಲಿ ಅನೇಕ ಸವಾಲುಗಳಿವೆ. ಜಿಬಿಎಯನ್ನು ಪರಿಚಯಿಸಲು ಇದು ಸೂಕ್ತ ಸಮಯ ಎಂದು ಅನಿಸಿದ್ದೇಕೆ ಎಂದು ಕೇಳಿದಾಗ, “ನಾವೆಲ್ಲರೂ ಬೆಂಗಳೂರಿನ ನಾಗರಿಕರು. ನಗರೀಕರಣ ಯಾವುದೇ ದೇಶ ಅಥವಾ ನಗರಕ್ಕೆ ದೊಡ್ಡ ಸವಾಲು. ಜನ ಬೆಂಗಳೂರಿಗೆ ವಲಸೆ ಬರುವುದು ಶಿಕ್ಷಣ, ಉದ್ಯೋಗ ಹಾಗೂ ಉತ್ತಮ ಜೀವನ ಕಟ್ಟಿಕೊಳ್ಳುವ ಆಸೆಯಿಂದ. ಯಾವುದೇ ನಗರದ ಜನಸಂಖ್ಯೆ ಹೆಚ್ಚಿದಾಗ ಸಮಸ್ಯೆಗಳು ಹೆಚ್ಚಾಗುತ್ತವೆ. ಶಿಕ್ಷಣದ ವಿಚಾರದಲ್ಲಿ ಬೆಂಗಳೂರು ದೇಶದ ಇತರೇ ನಗರಗಳಿಗಿಂತ ಉತ್ತಮವಾಗಿದೆ. ಬೆಂಗಳೂರಿನಲ್ಲಿ 25 ಲಕ್ಷ ಐಟಿ ಉದ್ಯೋಗಿಗಳು ಇದ್ದಾರೆ. 2 ಲಕ್ಷ ವಿದೇಶಿ ಪಾಸ್ ಪೋರ್ಟ್ ಹೊಂದಿರುವವರು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿದೆ” ಎಂದರು.

“ಕೆಂಪೇಗೌಡರು ಎಲ್ಲಾ ಸಮುದಾಯಗಳಿಗೂ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟು ಬೆಂಗಳೂರನ್ನು ನಿರ್ಮಿಸಿದರಾದರೂ ಬೆಂಗಳೂರು ಯೋಜಿತ ನಗರವಲ್ಲ. ಅನೇಕ ವಿಚಾರಗಳಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಆಕರ್ಷಣೆಯಾಗಿದೆ. ಬೆಂಗಳೂರಿನಲ್ಲಿ ಅತ್ಯುತ್ತಮ ಮಾನವ ಸಂಪನ್ಮೂಲವಿದೆ ಎಂಬ ಕಾರಣಕ್ಕೆ ಇಲ್ಲಿ ಎಚ್ಎಎಲ್, ಐಟಿಐ, ಬೆಮೆಲ್ ಸೇರಿದಂತೆ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿವೆ‌. ನಮ್ಮ ರಾಜ್ಯದಲ್ಲಿ 270ಕ್ಕೂ ಹೆಚ್ಚು ಇಂಜಿನಿಯರಿಂಗ್ ಕಾಲೇಜು, 70 ಮೆಡಿಕಲ್ ಕಾಲೇಜು, 1,400 ನರ್ಸಿಂಗ್ ಕಾಲೇಜುಗಳಿವೆ. ಆದರೂ ಸಂಚಾರ, ಕಸ ವಿಲೇವಾರಿ, ಕುಡಿಯುವ ನೀರಿನಂತಹ ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದಕ್ಕೆ ಪರಿಣಾಮಕಾರಿ ಆಡಳಿತ, ಪರಿಣಾಮಕಾರಿ ಸೇವೆ, ಸಮನ್ವಯತೆ ಸಾಧಿಸುವ ಉದ್ದೇಶದಿಂದ ಜಿಬಿಎ ಅಸ್ತಿತ್ವಕ್ಕೆ ತರಲಾಗಿದೆ. ನಾಗರಿಕರು ಹಾಗೂ ಅಧಿಕಾರಿಗಳು ಪರಸ್ಪರ ಸಹಕಾರದಲ್ಲಿ ಕೆಲಸ ಮಾಡುವವರೆಗೂ ಬೆಂಗಳೂರಿನ ಪ್ರಗತಿ ಅಸಾಧ್ಯ” ಎಂದು ತಿಳಿಸಿದರು.

“ಬೆಂಗಳೂರು 198 ವಾರ್ಡ್ ಗಳೊಂದಿಗೆ ದೊಡ್ಡ ಪ್ರಮಾಣದಲ್ಲಿತ್ತು. ಎಲ್ಲಾ ವಾರ್ಡ್ ಗಳನ್ನು ನಿರ್ವಹಣೆ ಮಾಡಲು ಕೇವಲ ಒಬ್ಬರೇ ಆಯುಕ್ತರಿದ್ದರು. ಒಬ್ಬರಿಂದ ಇಷ್ಟೆಲ್ಲಾ ನಿರ್ವಹಣೆ ಕಷ್ಟ. ಮುಂದಿನ 10-15 ವರ್ಷಗಳಲ್ಲಿ ಬೆಂಗಳೂರಿನ ಜನಸಂಖ್ಯೆ 2 ಕೋಟಿ ತಲುಪಲಿದೆ. ಸಂಚಾರ ದಟ್ಟಣೆ ಸೇರಿದಂತೆ ಇತರೆ ಸಮಸ್ಯೆಗಳನ್ನು ನಿಭಾಯಿಸಲು ನಾನು ಮೊದಲು ಬೆಂಗಳೂರಿನ ಪಾಲಿಕೆಗಳನ್ನು ವಿಂಗಡಿಸಿ, ಉತ್ತಮ ಆಡಳಿತ ನೀಡಲು ಐದು ಪಾಲಿಕೆಗಳನ್ನು ಮಾಡಿ 368 ವಾರ್ಡ್ ಗಳನ್ನು ರಚಿಸಲಾಗಿದೆ. ಸ್ವಚ್ಛತೆ, ಸಂಚಾರ ಸುಧಾರಣೆಗೆ ಅನೇಕ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಸಮಸ್ಯೆಗಳು ಮಾತ್ರ ದೊಡ್ಡದಾಗಿ ಸದ್ದು ಮಾಡಲಾಗಿದೆ. ನಮ್ಮಲ್ಲಿ ಮಾಧ್ಯಮಗಳು ಸ್ವತಂತ್ರ್ಯವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಬೇರೆ ರಾಜ್ಯಗಳಲ್ಲಿ ಈ ಅವಕಾಶ ಇಲ್ಲ” ಎಂದು ತಿಳಿಸಿದರು.

ಕಸ ನಿರ್ವಹಣೆಯಲ್ಲಿ ಜನರಲ್ಲಿ ನಾಗರಿಕ ಪ್ರಜ್ಞೆ ಇರಬೇಕು:

ಬೆಂಗಳೂರು ನಗರದಲ್ಲಿ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲ, ಹೀಗಾಗಿ ಜಿಬಿಎ ಮೂಲಕ ಹೇಗೆ ಸಮನ್ವಯತೆ ಸಾಧಿಸಲಾಗುವುದು ಎಂದು ಕೇಳಿದಾಗ “ನಮಗೆ ಹಸಿರು ಹಾಗೂ ಸ್ವಚ್ಛ ಬೆಂಗಳೂರು ಬೇಕು. ಆದರೆ ಪ್ರತಿ ಮನೆಯಲ್ಲಿ ಎರಡು ಮೂರು ವಾಹನಗಳಿವೆ. ಮನೆಯೊಳಗೆ ನಿಲ್ಲಿಸಲು ಜಾಗವಿಲ್ಲ ಎಂದು ರಸ್ತೆಯಲ್ಲಿ ನಿಲ್ಲಿಸಿದ್ದಾರೆ. ಬೆಂಗಳೂರಿನ ಜನರಲ್ಲಿ ಒಂದು ವರ್ಗ ಬೆಂಗಳೂರನ್ನು ಜಾಗತಿಕ ನಗರವನ್ನಾಗಿ ನೋಡಿದರೆ, ಮತ್ತೆ ಕೆಲವು ವರ್ಗಗಳಿಗೆ ಜ್ಞಾನ ಇಲ್ಲ. ಕೆಲವರು ವಾಹನದಲ್ಲಿ ಕಸ ತಂದು ರಸ್ತೆಯಲ್ಲಿ ಹಾಕಿ ಹೋಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಏನು ಮಾಡಲು ಸಾಧ್ಯ. ಹೀಗಾಗಿ ಜನರಲ್ಲಿ ನಾಗರಿಕ ಪ್ರಜ್ಞೆ ಬಹಳ ಮುಖ್ಯ. ಬೆಂಗಳೂರಿನ ಹೊರ ವಲಯದಲ್ಲಿ ದೊಡ್ಡ ಪ್ರಮಾಣದಲ್ಲಿ ಕಟ್ಟಡ ತ್ಯಾಜ್ಯ ಸುರಿಯುತ್ತಿದ್ದಾರೆ. ಹೀಗಾಗಿ ಈ ರೀತಿ ಕಸ ಎಸೆಯುವ ಎಲ್ಲಾ ವಾಹನ ಮಾಲೀಕರಿಗೆ ನೋಟೀಸ್ ನೀಡುವಂತೆ ನಾನು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಳೆದ ಎರಡೂವರೆ ವರ್ಷಗಳಿಂದ ನಾನು ಕಸ ವಿಲೇವಾರಿ ವಿಚಾರದಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಕಸದ ಮಾಫಿಯಾ ನನ್ನ ಪ್ರಯತ್ನ ತಡೆಯುತ್ತಿವೆ. ನ್ಯಾಯಾಲದಲ್ಲಿ ಪಿಐಎಲ್ ಹಾಕಿ ನಮ್ಮನ್ನು ತಡೆಯುತ್ತಿದ್ದಾರೆ” ಎಂದು ತಿಳಿಸಿದರು.

ಜನ ಸಾಮಾನ್ಯರ ಅಭಿಪ್ರಾಯ ಸಂಗ್ರಹಿಸಲು ಕೇಳಲು ಯಾವುದಾದರೂ ಕ್ರಮ ಕೈಗೊಂಡಿದ್ದೀರಾ ಎಂದು ಕೇಳಿದಾಗ, “ಸದ್ಯಕ್ಕೆ 368 ವಾರ್ಡ್ ರಚಿಸಲಾಗಿದ್ದು, ಪ್ರತಿ ವಾರ್ಡ್ ನಲ್ಲಿ ವಾರ್ಡ್ ಸಮಿತಿ ರಚಿಸಲಾಗುವುದು. ಇದರಲ್ಲಿ ಎಲ್ಲಾ ವರ್ಗದ ಜನರಿಗೆ ಅವಕಾಶ ಮಾಡಿಕೊಡಲಾಗುವುದು. ಅವರು ಚರ್ಚೆ ಮಾಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು. ಜನರು ವಾರ್ಡ್ ಮಟ್ಟದ ಅಧಿಕಾರಿಗಳ ಜೊತೆ ಸಂಪರ್ಕ ಹೊಂದಿರಬೇಕು. ಅವರನ್ನು ಪ್ರಶ್ನೆ ಮಾಡುವಂತಿರಬೇಕು. ಜನರು ಸಂತೋಷವಾಗಿದ್ದರೆ ನಾವು ಸಂತೋಷವಾಗಿರುತ್ತೇವೆ. ಅವರು ತೆರಿಗೆ ಪಾವತಿದಾರರು ಅವರ ಕೊಡುಗೆ ಬಹಳ ಮುಖ್ಯವಾಗಿದೆ” ಎಂದರು.

ಪಾರದರ್ಶಕತೆಗೆ ಆದ್ಯತೆ:

ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ಕೂಡ ದೊಡ್ಡ ಸಮಸ್ಯೆಯಾಗಿದ್ದು ಜಿಬಿಎ ಇದನ್ನು ಹೇಗೆ ನಿಭಾಯಿಸಲಿದೆ ಎಂದು ಕೇಳಿದಾಗ, “ಭ್ರಷ್ಟಾಚಾರ ನಿಯಂತ್ರಿಸಿ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಲು ಅನೇಕ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಮನೆ ಕಟ್ಟಬೇಕಾದರೆ ಕಟ್ಟಡ ನಕ್ಷೆ ಅನುಮೋದನೆ ಪಡೆಯಲು ಕಚೇರಿ ಹಾಗೂ ಅಧಿಕಾರಿಗಳ ಸುತ್ತ ಅಲೆಯಬೇಕಾಗುತ್ತಿತ್ತು. ಹೀಗಾಗಿ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತಂದಿದ್ದು 50X80 ನಿವೇಶನದಲ್ಲಿ ಮನೆ ಕಟ್ಟುವವರು ನಿಯೋಜಿತ ಇಂಜಿನಿಯರ್ ಗಳ ಬಳಿ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯಬಹುದು. ಈ ಹಿಂದೆ ತೆರಿಗೆ ಪಾವತಿಗೆ ಸ್ವಯಂ ಘೋಷಣೆ ಯೋಜನೆ ಅವಕಾಶ ನೀಡಿದೆವು. ಕೇವಲ 10% ಜನ ಮಾತ್ರ ತಮ್ಮ ಆಸ್ತಿ ಮೌಲ್ಯವನ್ನು ಸರಿಯಾಗಿ ಪ್ರಕಟಿಸಿದರು. ಉಳಿದವರು ಸ್ಥಳೀಯ ಅಧಿಕಾರಿಗಳ ಜೊತೆಗೂಡಿ ತಮ್ಮ ಆಸ್ತಿ ಮೌಲ್ಯಕ್ಕಿಂತ ಕಡಿಮೆ ತೋರಿಸಿ ತೆರಿಗೆ ತಪ್ಪಿಸಿಕೊಳ್ಳಲು ಮುಂದಾಗಿದ್ದಾರೆ. ಹೀಗಾಗಿ ನಾವು ಬೆಂಗಳೂರಿನ ಆಸ್ತಿಗಳ ಸಮೀಕ್ಷೆ ಮಾಡುತ್ತಿದ್ದು, ಯಾರು ಎಷ್ಟು ಆಸ್ತಿ ಹೊಂದಿದ್ದಾರೆ ಎಂದು ಪತ್ತೆ ಮಾಡುತ್ತಿದ್ದೇವೆ. ದೆಹಲಿಯಲ್ಲಿ ತೆರಿಗೆ ಮೂಲಕ ಸಂಗ್ರಹವಾಗುವ ಆದಾಯ ಕೇವಲ 2 ಸಾವಿರ ಕೋಟಿ ಮಾತ್ರ. ಆದರೆ ನಮ್ಮ ಸರ್ಕಾರ ಬಂದ ನಂತರ ನಾವು ಓಟಿಎಸ್ ಅವಕಾಶ ಕಲ್ಪಿಸಿದ ಕಾರಣಕ್ಕೆ ಬೆಂಗಳೂರಿನಲ್ಲಿ ತೆರಿಗೆ ಸಂಗ್ರಹ 6-7 ಸಾವಿರ ಕೋಟಿಗೆ ತಲುಪಿದೆ. ಬೆಂಗಳೂರಿನ ರಸ್ತೆಗುಂಡಿ ವಿಚಾರವಾಗಿ ಸಾಕಷ್ಟು ಟೀಕೆ ಮಾಡುತ್ತಾರೆ. ಆದರೆ ದೆಹಲಿಯಲ್ಲಿರುವ ನನ್ನ ಮನೆ ಮುಂದಿನ ರಸ್ತೆಯಲ್ಲಿ 100 ಮೀಟರ್ ವ್ಯಾಪ್ತಿಯಲ್ಲೇ 70 ರಸ್ತೆಗುಂಡಿಗಳಿವೆ. ಆದರೂ ದೆಹಲಿ ಹಾಗೂ ಇತರೆ ನಗರಗಳಲ್ಲಿರುವ ರಸ್ತೆಗುಂಡಿಗಳು ಸುದ್ದಿಯಾಗುವುದಿಲ್ಲ” ಎಂದು ವಿವರಿಸಿದರು.

ಟೀಕೆಗಳನ್ನು ಸ್ವಾಗತಿಸುತ್ತೇನೆ; 10-15 ವರ್ಷಗಳಲ್ಲಿ ನನ್ನ ಸಾಧನೆಯನ್ನು ಜನ ಸ್ಮರಿಸುತ್ತಾರೆ

ರಸ್ತೆಗುಂಡಿ ಎಲ್ಲಾ ನಗರಗಳಲ್ಲೂ ಇವೆ. ಆದರೂ ಬೆಂಗಳೂರಿನ ಬಗ್ಗೆ ಹೆಚ್ಚು ಟೀಕೆಗಳಾಗುತ್ತಿವೆ ಎಂದು ಕೇಳಿದಾಗ, “ನಾನು ಟೀಕೆಗಳನ್ನು ಸ್ವಾಗತಿಸುತ್ತೇನೆ. ರಾಜಕಾರಣಿಗಳು ಟೀಕೆಗಳಿಗೆ ಹೆದರಬಾರದು. ಜನರ ಧ್ವನಿಯನ್ನು ಆಲಿಸಬೇಕು. ಜನ ಟೀಕೆ ಮಾಡಿದಾಗ ಮಾತ್ರ ನಾವು ನಮ್ಮ ತಪ್ಪು ತಿದ್ದಿಕೊಳ್ಳಲು ಸಾಧ್ಯ. ಇಡೀ ದೇಶದಲ್ಲಿ ಯಾವುದೇ ನಗರದ ಸಚಿವರು ತಮ್ಮ ಸಾರ್ವಜನಿಕರಿಗೆ ಕರೆ ನೀಡಿ ರಸ್ತೆ ಗುಂಡಿ, ಕಸ ಬಗ್ಗೆ ಮಾಹಿತಿ ನೀಡಿ ಎಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರಾ? ಆ ಕೆಲಸವನ್ನು ನಾವು ಮಾಡಿದ್ದೇನೆ. ಪರಿಣಾಮ ನಮ್ಮ ಅಧಿಕಾರಿಗಳಿಗೆ 13 ಸಾವಿರ ರಸ್ತೆಗುಂಡಿಗಳ ಬಗ್ಗೆ ಮಾಹಿತಿ ಸಿಕ್ಕಿದ್ದು, ಅವುಗಳನ್ನು ಮುಚ್ಚುತ್ತಿದ್ದೇವೆ. ಇದು ತಕ್ಷಣವೇ ಬಗೆಹರಿಯುವುದಿಲ್ಲ. ನಾನು ಈ ಇಲಾಖೆ ಜವಾಬ್ದಾರಿಯನ್ನು ಬಹಳ ಆಸಕ್ತಿಯಿಂದ ವಹಿಸಿಕೊಂಡಿದ್ದೇನೆ. ಬೆಂಗಳೂರಿನಲ್ಲಿ ಓದಿ, ವಾಸ ಮಾಡಿ, ಕೆಲಸ ಮಾಡಿದ್ದೇನೆ. ನನ್ನ ಅಧಿಕಾರ ಅವಧಿಯಲ್ಲಿ ಬೆಂಗಳೂರಿಗೆ ಏನಾದರೂ ಕೊಡುಗೆ ನೀಡಬೇಕು ಎಂದು ಪಣತೊಟ್ಟಿದ್ದೇನೆ. ನನ್ನ ಕೆಲಸಗಳು ಇಂದು ಜನರ ಕಣ್ಣಿಗೆ ಕಾಣದೇ ಇರಬಹುದು. ಆದರೆ ಆದರೆ ಮುಂದಿನ 10 ವರ್ಷಗಳ ನಂತರ ಬೆಂಗಳೂರಿಗೆ ನನ್ನ ಕೊಡುಗೆ ಏನು ಎಂದು ಅರ್ಥವಾಗುತ್ತದೆ. ಜನ ನನ್ನನ್ನು ಸ್ಮರಿಸುತ್ತಾರೆ” ಎಂದು ತಿಳಿಸಿದರು.

ಟನಲ್ ರಸ್ತೆ ಹೊರತಾಗಿ ಪರ್ಯಾಯ ಪರಿಹಾರ ಏನಿದೆ?

ಟನಲ್ ರಸ್ತೆಗೆ ಸಾಕಷ್ಟು ವಿರೋಧವಿದೆ, ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆ ಅಲ್ಲವೇ ಎಂದು ಕೇಳಿದಾಗ, “ನೀವು ಎಲ್ಲರನ್ನು ತೃಪ್ತಿಪಡಿಸಲು ಆಗುವುದಿಲ್ಲ. ಟೀಕೆ ಇದ್ದೇ ಇರುತ್ತದೆ. ಸಾರ್ವಜನಿಕ ಸಾರಿಗೆ ಉತ್ತಮ ಆಯ್ಕೆಯೆಂಬುದು ನಿಜ. ಹಾಗಾದರೆ ಇನ್ನು ಎಷ್ಟು ಸಾರ್ವಜನಿಕ ಸಾರಿಗೆಗೆ ವಾಹನ ಸೇರಿಸಬೇಕು? 1 ಸಾವಿರ ಸಾಕೇ? ನಾನು ಸೇರಿಸಲು ಸಿದ್ಧ. ಜನರೆಲ್ಲರೂ ಬಸ್ ನಲ್ಲಿ ಪ್ರಯಾಣ ಆರಂಭಿಸುತ್ತಾರಾ? ಹೀಗಾಗಿ ಟನಲ್ ಹೊರತಾಗಿ ಪರ್ಯಾಯ ಪರಿಹಾರ ಏನಿದೆ? ಇದೇ ಕಾರಣಕ್ಕೆ ನಾನು ಟನಲ್ ರಸ್ತೆಗೆ ಮುಂದಾಗಿದ್ದೇನೆ. ಇದರ ಜೊತೆಗೆ 44 ಕಿ.ಮೀ ಡಬಲ್ ಡೆಕ್ಕರ್ ಮೇಲ್ಸೇತುವೆ, 120 ಕಿ.ಮೀ ನಷ್ಟು ಉದ್ದದ ಮೇಲ್ಸೇತುವೆಗಳಿಗೆ ಯೋಜನೆ ರೂಪಿಸಿದ್ದೇವೆ. ಇನ್ನು ರಾಜಕಾಲುವೆಗಳ ಅಕ್ಕಪಕ್ಕದಲ್ಲಿ 50 ಅಡಿ ಬಫರ್ ವಲಯದಲ್ಲಿ ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಿದ್ದೇವೆ. ಆಮೂಲಕ 300 ಕಿ.ಮೀ ಹೆಚ್ಚುವರಿ ರಸ್ತೆ ಸೇರ್ಪಡೆ ಮಾಡಲಾಗುತ್ತಿದೆ. ಇದು ಸಣ್ಣ ಕೆಲಸವಲ್ಲ. ಇದಕ್ಕೆ ಆರ್ಥಿಕ ನೆರವಿನ ಅಗತ್ಯವಿದೆ. ಕೇವಲ ಒಂದೆರಡು ವರ್ಷಗಳಲ್ಲಿ ಎಲ್ಲವನ್ನು ಸರಿಪಡಿಸಲು ಸಾಧ್ಯವಿಲ್ಲ. ಸಮಯವೇ ಸಂಪತ್ತು. ಹೀಗಾಗಿ ನಮ್ಮ ವಿದ್ಯಾರ್ಥಿಗಳ ಸಮಯವನ್ನು ಟ್ರಾಫಿಕ್ ನಲ್ಲಿ ಹಾಳು ಮಾಡಲು ಬಯಸುವುದಿಲ್ಲ. ಆದಷ್ಟು ಬೇಗ ಈ ಯೋಜನೆಗಳನ್ನು ಜಾರಿಗೆ ತರುತ್ತೇವೆ” ಎಂದು ತಿಳಿಸಿದರು.

ಬಿಜೆಪಿ ಆಡಳಿತದಲ್ಲಿ ಒಂದೇ ಒಂದು ಯೋಜನೆ ಆರಂಭಿಸಿಲ್ಲ

“ಬೆಂಗಳೂರಿನಲ್ಲಿ 104 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ ರಸ್ತೆ ಯೋಜನೆ ರೂಪಿಸಲಾಗಿದೆ. 40 ಕಿ.ಮೀ ಉದ್ದದ ಟನಲ್ ರಸ್ತೆ ನಿರ್ಮಿಸಲು ಮುಂದಾಗಿದ್ದೇವೆ. ಅನೇಕ ಟೀಕೆಗಳು ವ್ಯಕ್ತವಾಗುತ್ತಿವೆ. ಇದು ಸೂಕ್ತ ಪರಿಹಾರವಲ್ಲದಿದ್ದರೆ ಮುಂಬೈನಲ್ಲಿ ಈ ಯೋಜನೆ ಯಾಕೆ ಮಾಡುತ್ತಿದ್ದಾರೆ? ಜಪಾನ್, ಲಂಡನ್ ನಲ್ಲಿ ಯಾಕೆ ಮಾಡುತ್ತಿದ್ದಾರೆ. ನೀವು ಹೆಬ್ಬಾಳ, ಕೆ.ಆರ್ ಪುರಂ ಜಕ್ಷನ್ ಸೇರಿದಂತೆ ಎಲ್ಲಿ ನೋಡಿದರೂ ಟ್ರಾಫಿಕ್ ಹೆಚ್ಚಾಗಿದೆ. ನಮ್ಮ ಸರ್ಕಾರಕ್ಕೂ ಮುನ್ನ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ನಾಲ್ಕು ವರ್ಷಗಳ ಅಧಿಕಾರ ಮಾಡಿತ್ತು. ಈ ಸಮಯದಲ್ಲಿ ಅವರು ಬೆಂಗಳೂರಿನ ಸಮಸ್ಯೆ ಬಗೆಹರಿಸಲು ಒಂದು ಫ್ಲೈಓವರ್, ರಸ್ತೆ ಸೇರಿದಂತೆ ಒಂದೇ ಒಂದು ಕೆಲಸ ಮಾಡಿದ್ದರೆ ಹೇಳಿ, ನಾನು ಇಲ್ಲೇ ನನ್ನ ಹೆಸರು ಬದಲಾಯಿಸಿಕೊಂಡು ಹೋಗುತ್ತೇನೆ. ಟನಲ್ ಹೊರತಾಗಿ ಉಳಿದ ಎಲ್ಲಾ ಯೋಜನೆಗಳು ಮೂರ್ನಾಲ್ಕು ವರ್ಷಗಳಲ್ಲಿ ಮುಕ್ತಾಯವಾಗಲಿದ್ದು, ಟನಲ್ ರಸ್ತೆಗೆ ನಾಲ್ಕು ವರ್ಷಕ್ಕಿಂತ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಈ ಯೋಜನೆಗೆ ಟನರ್ ಕೊರೆಯುವ ಯಂತ್ರ ಬರಲು ಒಂದೂವರೆ ವರ್ಷಬೇಕಾಗುತ್ತದೆ. ಟನಲ್ ರಸ್ತೆಯಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಆಗುವುದಿಲ್ಲ. ಟೀಕೆ ಮಾಡುವವರು ಮಾಡುತ್ತಿರುತ್ತಾರೆ” ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಂಪನ್ಮೂಲ ಕ್ರೂಢೀಕರಣ ಹೇಗೆ ಎಂದು ಕೇಳಿದಾಗ, “ಕೆಲವು ಪ್ರದೇಶಗಳಲ್ಲಿ ನಾವು ಬೂಟ್ ಮಾದರಿ (ಬಿಲ್ಡ್ ಆಪರೇಟ್ ಟ್ರಾನ್ಸ್ಪೋರ್ಟ್) ಅಳವಡಿಸಿಕೊಂಡಿದ್ದೇವೆ. ಬೆಂಗಳೂರಿನಲ್ಲಿ ನಾವು 1.25 ಲಕ್ಷ ಕೋಟಿ ಮೊತ್ತದ ಯೋಜನೆಗಳಿಗೆ ಮುಂದಾಗಿದ್ದೇವೆ. ಟನಲ್ ರಸ್ತೆಗೆ 35-40 ಸಾವಿರ ಕೋಟಿ, ಮೇಲ್ಸೇತುವೆಗೆ ಸುಮಾರು 14 ಸಾವಿರ ಕೋಟಿ, ಡಬಲ್ ಡೆಕ್ಕರ್ ರಸ್ತೆಗೆ 10 ಸಾವಿರ ಕೋಟಿ, 16,100 ಕೋಟಿ, ಬಫರ್ ಜೋನ್ ರಸ್ತೆಗೆ 4 ಸಾವಿರ ಕೋಟಿ ಅನುದಾನದ ಅಗತ್ಯವಿದೆ” ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷದ ನೀತಿ, ಯೋಜನೆಗಳನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ:

ಸರ್ಕಾರ ಬದಲಾದರೆ ನಿಮ್ಮ ಯೋಜನೆಗಳು ಹೇಗೆ ಮುಂದುವರಿಯಲಿವೆ ಎಂದು ಕೇಳಿದಾಗ, “ನಮ್ಮದು ಕಾಂಗ್ರೆಸ್ ಪಕ್ಷ. ಈ ದೇಶಕ್ಕೆ ಸಂವಿಧಾನ, ಸ್ವಾತಂತ್ರ್ಯ ಕೊಟ್ಟ ಪಕ್ಷ. ಈ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ತಂದಿರುವ ಕಾನೂನು, ಯೋಜನೆಗಳನ್ನು ಬೇರೆ ಯಾವುದೇ ಸರ್ಕಾರಗಳು ಬದಲಾಯಿಸಲು ಸಾಧ್ಯವಾಗಿಲ್ಲ. ಶೈಕ್ಷಣಿಕ ಹಕ್ಕು, ಆಹಾರ ಭದ್ರತೆ, ಉದ್ಯೋಗ ಖಾತ್ರಿ, ಬ್ಯಾಂಕುಗಳ ರಾಷ್ಟ್ರೀಕರಣ, ಆಧಾರ್, ಭೂ ಸುಧಾರಣೆ ಕಾಯ್ದೆ ಯಾವುದೇ ಆಗಿರಲಿ ನಮ್ಮ ಯೋಜನೆಯನ್ನು ಬೇರೆಯವರು ಬದಲಿಸಲು ಆಗುವುದಿಲ್ಲ. ನಾವು ಬೆಂಗಳೂರಿನ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣ ಮಾಡುತ್ತಿದ್ದು, ಬಿ ಖಾತಗಳನ್ನು ಎ ಖಾತಾ ಮಾಡುತ್ತಿದ್ದೇವೆ. ಇ ಖಾತಾ ನೀಡುತ್ತಿದ್ದೇವೆ. ಬೆಂಗಳೂರಿನ ನಾಗರಿಕರು ತಮ್ಮ ಆಸ್ತಿ ದಾಖಲೆಗಳನ್ನು ಸರಿಯಾಗಿ ಹೊಂದಿರಬೇಕು ಎಂದು ನಾವು ಈ ಪ್ರಯತ್ನ ಮಾಡುತ್ತಿದ್ದೇವೆ. ನಾವು ಯಾವುದೇ ತೀರ್ಮಾನ ಮಾಡಿದರೂ ಕಾನೂನಾತ್ಮಕವಾಗಿ ಹಾಗೂ ದೂರದೃಷ್ಟಿಯಿಂದ ಮಾಡಿರುತ್ತೇವೆ. ಇದನ್ನು ಬೇರೆ ಸರ್ಕಾರಗಳು ಬದಲಾಯಿಸಲು ಆಗುವುದಿಲ್ಲ. ರಾಜಕೀಯವಾಗಿ ಕೆಲವರು ಟೀಕೆ ಮಾಡಬಹುದು. ಅದನ್ನು ನಾನು ಸ್ವಾಗತಿಸುತ್ತೇನೆ. ಜಿಬಿಎ ಮಾಡುವಾಗಲೂ ನಾನು ಸಮಿತಿ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಮುಂದುವರೆದಿದ್ದು” ಎಂದರು.

ಸಂತ ಜೋಸೆಫರ್ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಅವರು ಬೆಂಗಳೂರಿನ ಪಾದಚಾರಿ ಮಾರ್ಗಗಳ ಪರಿಸ್ಥಿತಿ ಸರಿಯಿಲ್ಲ ಎಂದು ಕೇಳಿದಾಗ, “ಪಾದಚಾರಿ ಮಾರ್ಗಗಳಲ್ಲಿ ಸಮಸ್ಯೆ ಇರುವುದನ್ನು ನಾನು ಒಪ್ಪುತ್ತೇನೆ. ಈಗ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಮಾರ್ಗ ಸಾಗಿದೆ. ಇನ್ನು ಕೇಬಲ್ ಗಳನ್ನು ಭೂಮಿಯ ಒಳಗೆ ತೆಗೆದುಕೊಂಡು ಹೋಗಲು ಅಗೆಯಲಾಗುತ್ತದೆ. ಈ ಕಾಮಗಾರಿಗಳನ್ನು ಸರಿಯಾದ ಸಮಯಕ್ಕೆ ಮುಗಿಸುತ್ತಿಲ್ಲ. ಹೀಗಾಗಿ ನಾವು ಕೇಬಲ್ ಗಳಿಗಾಗಿಯೇ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುತ್ತಿದ್ದೇವೆ. ಬೆಂಗಲೂರಿನಲ್ಲಿ ಟಿವಿ ಕೇಬಲ್ ಗಳನ್ನು ಹೇಗೆಂದರೆ ಹಾಗೆ ಎಳೆಯಲಾಗಿದೆ. ಅದನ್ನು ಕೂಡಲೇ ಕತ್ತರಿಸುತ್ತೇನೆ. ಆಗ ಜನರೇ ಟೀವಿ ಬರುತ್ತಿಲ್ಲ ಎಂದು ಟೀಕೆ ಮಾಡುತ್ತಾರೆ. ನಾವು ಕೇಬಲ್ ಗಳನ್ನು ಭೂಮಿಯ ಒಳಗೆ ತೆಗೆದುಕೊಂಡು ಹೋಗಲು 400 -500 ಕಿ.ಮೀ ಉದ್ದದಷ್ಟು ರಸ್ತೆಗಳಲ್ಲಿ ಅವಕಾಶ ಕಲ್ಪಿಸಿದ್ದೇವೆ. ಆದರೂ ಯಾರೂ ಇದನ್ನು ಬಳಸುತ್ತಿಲ್ಲ. ಈ ಸಮಸ್ಯೆಯನ್ನು ವ್ಯವಸ್ಥಿತವಾಗಿ ಸರಿಪಡಿಸಲಾಗುವುದು. ಇನ್ನು ಪಾದಚಾರಿ ಮಾರ್ಗಗಳಲ್ಲಿ ಬೀದಿ ವ್ಯಾಪಾರಿಗಳು ತಮ್ಮ ವ್ಯಾಪಾರ ಮಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಪಾಲಿಕೆ ವತಿಯಿಂದ ಪ್ರತ್ಯೇಕ ವಾಹನ ನೀಡಲಾಗುತ್ತಿದೆ. ಆಮೂಲಕ ಪಾದಚಾರಿ ಮಾರ್ಗವನ್ನು ತೆರವುಗೊಳಿಸಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

ಮೌಂಟ್ ಕಾಲೇಜು ವಿದ್ಯಾರ್ಥಿಯೊಬ್ಬರು ಮೆಟ್ರೋ ಪ್ರಯಾಣ ದರ ಏರಿಕೆ ಹಾಗೂ ಹಳದಿ ಮಾರ್ಗದಲ್ಲಿ ರೈಲುಗಳ ಕೊರತೆ ವಿಚಾರವಾಗಿ ಕೇಳಿದಾಗ, “ಮೆಟ್ರೋ ದರ ನಿಗದಿ ಮಾಡಿದ್ದು ನಾವಲ್ಲ. ಈ ಯೋಜನೆಯಲ್ಲಿ ನಾವು ಹಾಗೂ ಕೇಂದ್ರ ಸರ್ಕಾರ ಪಾಲುದಾರರಾದರೂ ಇದಕ್ಕಾಗಿ ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದೆ. ಈ ಸಮಿತಿ ದರ ನಿಗದಿ ಮಾಡಲಿದೆ. ಅವರು ಆರ್ಥಿಕತೆ ಲೆಕ್ಕಾಚಾರದ ಮೇಲೆ ತೀರ್ಮಾನ ಮಾಡುತ್ತಾರೆ. ಇನ್ನು ಹಳದಿ ವಾರ್ಗದ ರೈಲುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಬೇಕು. ಆದರೆ ಈ ಮಧ್ಯದಲ್ಲೇ ಚೀನಾದಿಂದ ಆಮದು ನಿಲ್ಲಿಸಲಾಗಿತ್ತು. ಈಗ ನಾಲ್ಕನೇ ರೈಲು ತಲುಪಿದ್ದು, ಐದನೇ ರೈಲು ಶೀಘ್ರದಲ್ಲೇ ಆಗಮಿಸಲಿದೆ. ಇದಕ್ಕಾಗಿ ಕಾಲಮಿತಿ ನಿಗದಿಪಡಿಸಲಾಗಿದೆ. ಕೆಲವು ಸಂಸ್ಥೆಗಳು ಮೆಟ್ರೋ ರೈಲು ಬೋಗಿಗಳನ್ನು ರಾಜ್ಯದಲ್ಲೇ ಉತ್ಪಾದನೆ ಮಾಡಲು ಮುಂದಾಗಿದ್ದು, ನಾವು ಆ ಬಗ್ಗೆ ಗಮನಹರಿಸುತ್ತಿದ್ದೇವೆ” ಎಂದು ವಿವರಿಸಿದರು.

ಎಚ್ಎಎಲ್ ನಿವೃತ್ತ ನೌಕರರಾದ ಫ್ರಾನ್ಸಿಸ್ ಎಂಬುವವರು ಬಿಬಿಎಂಪಿ ಸಹಯೋಗದಲ್ಲಿ ನಾನು ಬೀದಿ ಸೇವಕ ಎಂಬ ಪರಿಕಲ್ಪನೆಯಲ್ಲಿ ನಮ್ಮ ಪ್ರದೇಶದ ರಸ್ತೆಗಳ ಸುಧಾರಣೆ, ಕಸ ವಿಲೇವಾರಿ ಮಾಡುತ್ತಿದ್ದೇವೆ. ನಮಗೆ ಜಿಬಿಎಯಲ್ಲಿ ನಮಗೆ ಸೇವೆ ಮಾಡುವಂತಹ ಕಾರ್ಪೊರೇಟರ್ ಗಳನ್ನು ನೀಡಿ ಎಂದು ಮಾಡಿದ ಮನವಿಗೆ “ನೀವು ಈಗಾಗಲೇ ಜನರ ಸೇವೆ ಮಾಡುತ್ತಿದ್ದು, ನೀವೆ ಚುನಾವಣೆಯಲ್ಲಿ ಸ್ಪರ್ಧಿಸಿ. ಉತ್ತಮ ನಾಯಕರನ್ನು ನಾನು ಆಯ್ಕೆ ಮಾಡುವುದಕ್ಕಿಂತ ನೀವೇ ಆಯ್ಕೆ ಮಾಡಬೇಕು” ಎಂದು ತಿಳಿಸಿದರು.

ಜಿಬಿಎ ಮೂಲಕ ಮುಂಬರುವ ದಿನಗಳಲ್ಲಿ ಯಾವುದೇ ಫ್ಲಾಟ್ ಗಳಿದ್ದರೂ ಅದರಲ್ಲಿ 40% ಹಸಿರು ರಬೇಕು ಎಂಬ ಕಾನೂನು ತನ್ನಿ ಎಂದು ನೀಡಿದ ಸಲಹೆಗೆ ಸ್ಪಂದಿಸಿ, “ಬೆಂಗಳೂರಿನಲ್ಲಿ ಈ ಹಿಂದೆ ಕೆಲವು ಬಡವಣೆಗಳಲ್ಲಿ ಮಾತ್ರ 10 ಸಾವಿರ ಚದರಡಿ ನಿವೇಷನಗಳಿದ್ದವು. ಈಗ ಸರ್ಕಾರ ನಿವೇಶನದ ಮಿತಿಯನ್ನು 50X80ಕ್ಕೆ ಸೀಮಿತಗೊಳಿಸಿದೆ. ಭೂಮಿಯ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನ ಹಲವು ಅಂತಸ್ಥಿನ ಕಟ್ಟಡ ನೀರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ನಾಗರೀಕರೂ ಸಹಕಾರ ನೀಡಬೇಕು. ನಿಮ್ಮ ಸಲಹೆಯನ್ನು ಸ್ವೀಕರಿಸಿ, ನಗರ ಯೋಜಕ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ” ಎಂದು ತಿಳಿಸಿದರು.

ವಿದ್ಯಾರ್ಥಿನಿ ಶ್ರೀನಿಧಿ ಎಂಬುವವರು ಟನಲ್ ಹಾಗೂ ಇತರೆ ಮೇಲ್ಸೇತುವೆ ಕಾಮಗಾರಿಗೆ ನಾಲ್ಕು ವರ್ಷ ಬೇಕು ಎಂದು ಹೇಳಿದ್ದೀರಿ. ಈಗ ತಾತ್ಕಾಲಿಕವಾಗಿ ಪರಿಹಾರ ಏನಿದೆ ಎಂದು ಕೇಳಿದಾಗ “ಇದಕ್ಕಾಗಿ ಸಂಚಾರ ದಟ್ಟಣೆ ರುವ ಪ್ರದೇಶಗಳಲ್ಲಿ ಮೇಲ್ಸೇತುವೆ ಯೋಜನೆ ನಿರ್ಮಿಸಲು ಮುಂದಾಗಿದ್ದೇವೆ. ಟ್ರಾಫಿಕ್ ಪೊಲೀಸರು ಎಐ ತಂತ್ರಜ್ಞಾನದ ಮೂಲಕ ಸಂಚಾರ ದಟ್ಟಣೆ ನಿವಾರಿಸಲು ಕಾರ್ಯಯೋಜನೆ ರೂಪಿಸುತ್ತಿದ್ದಾರೆ. ಸಂಚಾರ ದಟ್ಟಣೆ ನಿವಾರಣೆಗೆ ಅಲ್ಪಾವಧಿ ಹಾಗೂ ದೀರ್ಘಾವಧಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ” ಎಂದು ತಿಳಿಸಿದರು.

BREAKING: ಈ ಬಾರಿ ‘ರಾಜ್ಯೋತ್ಸವ ಪ್ರಶಸ್ತಿ’ಗೆ ಆನ್ ಮೂಲಕ ಅರ್ಜಿ ಪ್ರಕ್ರಿಯೆ ಇಲ್ಲ: ಸಚಿವ ಶಿವರಾಜ ತಂಗಡಗಿ

ರಾಜ್ಯದ 15 ಜಿಲ್ಲೆಗಳ 252 ಗ್ರಾಮ ಪಂಚಾಯ್ತಿಗಳಲ್ಲಿ ‘ನೀರಿದ್ದರೆ ನಾಳೆ ಯೋಜನೆ’ ಅನುಷ್ಠಾನ

Share. Facebook Twitter LinkedIn WhatsApp Email

Related Posts

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM3 Mins Read

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM5 Mins Read

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM9 Mins Read
Recent News

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

08/11/2025 6:41 PM

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ನೀವು ಅರ್ಜಿ ಸಲ್ಲಿಸಿದ ಪ್ರತಿ 4 ‘ಜಾಬ್’ಗಳಲ್ಲಿ 1 ನಕಲಿ ; ಶಾಕಿಂಗ್ ವರದಿ

08/11/2025 6:12 PM
State News
KARNATAKA

ತೀರ್ಥವನ್ನು ಮೂರು ಬಾರಿ ಏಕೆ ಸ್ವೀಕರಿಸಬೇಕು? ಇಲ್ಲಿದೆ ಅದರ ಹಿಂದಿನ ರಹಸ್ಯ

By kannadanewsnow0908/11/2025 6:41 PM KARNATAKA 3 Mins Read

ಆದ್ಯಂ ಕಾಯವಿಶುದ್ಧ್ಯರ್ಥಂ ದ್ವಿತೀಯಂ ಧರ್ಮಸಾಧನಮ್ ತೃತೀಯಂ ಮೋಕ್ಷದಂ ಪ್ರೋಕ್ತಂ ಏವಂ ತೀರ್ಥಂ ತ್ರಿಧಾಪಿಬೇತ್ ॥ ಮೊದಲನೆಯದು ಶರೀರಶುದ್ಧಿಗೆ, ಎರಡನೆಯದು ಧರ್ಮಸಾಧನೆಗೆ,…

ಇದು ‘ಕರಿ ಮೆಣಸು’ ಬೆಳೆ ನಿರ್ವಹಣೆಯ ಮಹತ್ವದ ವಿಧಾನ

08/11/2025 6:39 PM

ರೈತರಿಗೆ ಉಪಯುಕ್ತ ಮಾಹಿತಿ: ಈ ಸಮಗ್ರ, ಸುಸ್ಥಿತ ಕೃಷಿ ಪದ್ಧತಿ ಅನುಸರಿಸಿ, ಲಕ್ಷಾಂತರ ಆದಾಯ ಗಳಿಸಿ

08/11/2025 6:34 PM

ದೇಶದ ಇತಿಹಾಸದಲ್ಲೇ ಇದೇ ಮೊದಲು: ಪ್ರತಿಯೊಬ್ಬ ರಾಜ್ಯ ಸರ್ಕಾರಿ ನೌಕರರಿಗೂ ಸಂಘದ ಕ್ಯಾಲೆಂಡರ್ ವಿತರಣೆ

08/11/2025 5:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.