ಬೆಂಗಳೂರು : ಬಿಗ್ ಬಾಸ್ ಮನೆಗೆ ಮತ್ತೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಮಾಡಲಾಗಿದೆ.
ಜಾಲಿವುಡ್ ಸ್ಟುಡಿಯೋಸ್ ನ ಗೇಟ್ ಸಿ ಮಾತ್ರ ಓಪನ್ ಗೆ ಅವಕಾಶ ನೀಡಲಾಗಿದ್ದು, ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್ ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ.
ಕನ್ನಡ ಕಿರುತೆರೆಯ ಅತಿ ದೊಡ್ಡ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-12ರ ಜಾಲಿವುಡ್ ಸ್ಟುಡಿಯೋಗೆ ಬೀಗ ಬಿದ್ದ ಹಿನ್ನೆಲೆ ಎಲ್ಲ ಸ್ಪರ್ಧಿಗಳನ್ನ ಈಗಲ್ಟನ್ ರೆಸಾರ್ಟ್ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಈಗಲ್ಟನ್ ರೆಸಾರ್ಟ್ನಿಂದ ಎಲ್ಲಾ 17 ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ.
ಈಗಲ್ ಟನ್ ರೆಸಾರ್ಟ್ ನಿಂದ ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲಾ ಸ್ಪರ್ಧಿಗಳನ್ನು ಕಾರಿನ ಗಾಜಿಗೆ ಕಪ್ಪುಬಟ್ಟೆ ಸುತ್ತಿ ಸಿಬ್ಬಂದಿಗಳು ಬಿಗ್ ಬಾಸ್ ಮನೆಗೆ ಕರೆತಂದಿದ್ದಾರೆ.