ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಡಿಶಾದಿಂದ ರಾಜ್ಯದವರೆಗೆ ಮಳೆ ಮಾರುತಗಳು ವ್ಯಾಪಕವಾಗಿರುವ ಪರಿಣಾಮ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಹಾಗೂ ತುಮಕೂರು, ಶುಕ್ರವಾರಕ್ಕೆ ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ಚಿಕ್ಕಮ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.