ಬೆಂಗಳೂರು : 1,200 ಚದರಡಿಯೊಳಗೆ ನಿರ್ಮಿಸಿರುವ ಕಟ್ಟಡಗಳಿಗೆ ಒಸಿ ಹಾಗೂ ಸಿಸಿ ನೀಡುವ ಸಂಬಂಧ ಎದುರಾಗುವ ಕಾನೂನಿನ ಅಡೆತಡೆ ನಿವಾರಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಸಭೆ ನಡೆಯಿತು. ಈ ಸಂಬಂಧ ಡಿಸಿಎಂ ಡಿಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಕ್ಷೆ ಅನುಮೋದನೆ ಪಡೆಯದೆ ಕಾನೂನು ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಬಾರದೆಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಆದಾಗ್ಯೂ 1,200 ಅಡಿಯೊಳಗೆ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಸಿ ಹಾಗೂ ಸಿಸಿ ನೀಡಲು ಹಿಂದಿನ ಕ್ಯಾಬಿನೆಟ್ ಮೀಟಿಂಗ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಅನುಷ್ಠಾನಗೊಳಿಸಲು ಇಂಧನ ಇಲಾಖೆಗೆ ಕಾನೂನು ಅಡ್ಡಿ ಬರಲಿದೆ. ಈ ಕುರಿತು ಸಾಧಕ-ಬಾಧಕಗಳ ಬಗ್ಗೆ ಅಡ್ವೋಕೇಟ್ ಜನರಲ್, ಕಾನೂನು ಸಚಿವರ ಒಳಗೊಂಡ ಅಧಿಕಾರಿಗಳ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇನ್ನಿತರ ಪ್ರದೇಶದಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವ ಕುರಿತಾಗಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಚರ್ಚಿಸಲಾಯಿತು. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್.ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇನ್ನಿತರ ಪ್ರದೇಶದಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವ ಕುರಿತಾಗಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಪಾಲ್ಗೊಂಡು, ಚರ್ಚಿಸಲಾಯಿತು.
ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಹೆಚ್… pic.twitter.com/0bFBrSPvfw— DK Shivakumar (@DKShivakumar) October 8, 2025