ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ CM ಬದಲಾವಣೆ ಕುರಿತು ಯಾವುದೇ ಸಚಿವರು ಶಾಸಕರು ಮಾತನಾಡಬಾರದು ಇನು ಖಡಕ್ ಎಚ್ಚರಿಕೆ ನೀಡಿದ್ದರು ಸಹ ಇದೀಗ ಇಕ್ಬಾಲ್ ಹುಸೇನ್ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್ CM ಆಗ್ತಾರೆ ಅನ್ನೋದು ನನ್ನ ಅಭಿಲಾಷೆ ಎಂದು ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಸ್ಪಷ್ಟ ಅಭಿಪ್ರಾಯವನ್ನು ಹೈ ಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಕಾಂಗ್ರೆಸ್ ಶಿಸ್ತಿನ ಪಕ್ಷ ಹೈ ಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಎಲ್ಲರು ಸೇರಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ.
ಅನಿಸಿಕೆ, ಅಭಿಲಾಷೆಯನ್ನ ಹೈಕಮಾಂಡ್ ಬಳಿ ಸ್ಪಷ್ಟವಾಗಿ ಹೇಳಿದ್ದೇನೆ ಇದಕ್ಕೆ ನಾನು ಬದ್ಧನಾಗಿದ್ದೇನೆ, ಹೈ ಕಮಾಂಡ್ ತೀರ್ಮಾನ ಮಾಡುತ್ತೆ. ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತ ಹಿಂದೆ ಕೂಡ ಹೇಳಿದ್ದೆ, ಈಗಲೂ ಹೇಳುತ್ತೇನೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ಕೊಪ್ಪಳದಲ್ಲಿ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದರು.