ಬೆಂಗಳೂರು : ಬೆಂಗಳೂರಲ್ಲಿ ಸಿಟಿ ಸಿವಿಲ್ ಕೋರ್ಟ್ ನ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೋರ್ಟ್ ನ 5ನೇ ಮಹಡಿಯಿಂದ ಕೆಳ್ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣ ಆರೋಪಿಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಸಾರ್ವಜನಿಕರು ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಹಲಸೂರು ಗೇಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.