Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ | Karnataka 2nd PU Results

08/04/2026 3:56 PM

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

08/04/2026 3:55 PM

ಬಳ್ಳಾರಿಯಲ್ಲಿ ರೈಲ್ವೆ ಪೊಲೀಸರ ಭರ್ಜರಿ ಬೇಟೆ; ರೈಲಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ 40 ಕೆಜಿ ಗಾಂಜಾ ವಶ

08/04/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ
KARNATAKA

ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

By kannadanewsnow0909/10/2025 1:50 PM

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು ಮೂರು ಲಕ್ಷ ಮನೆಗಳನ್ನು ಐದು ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ  25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು ಏಳು ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು

ಬಿಗ್ ಬಾಸ್ ಸಮಸ್ಯೆ ಬಗೆಹರಿಸಲಿ

ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು  ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ್ಯಾಕೆ ಈ  ಕ್ರಮ ಕೈಗೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ‌, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ.  ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ.  ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದರೆ ಎಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ

ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿಯಾಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನವೆಂಬರ್ ನಲ್ಲಿ ಏನಾಗುತ್ತೊ ಬಿಡುತ್ತದೊ ಅದು ಕಾಂಗ್ರೆಸ್ ಆಂತರಿಕ ವಿಚಾರ.  ಆದರೆ, ಒಂದು ವಿಚಾರ ಸ್ಪಷ್ಟ ಆಡಳಿತ ಮಾಡುವುದನ್ನು ಬಿಟ್ಟು ಸಿಎಂ ನಾನು ಮುಂದುವರೆಯುತ್ತೇನೆ ಎನ್ನುವುದು ಕೆಲವರು ಅವರು ಮುಂದುವರೆಯುವುದಿಲ್ಲ ಎನ್ನುವುದು. ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಡು ಗೊಂದಲ ಇದೆ. ಅಶಿಸ್ತು ತೋರಿದರೆ ಕ್ರಮ ಕೈಗೊಳ್ಳುತ್ತೆನೆ ಎಂದರೂ ಶಾಸಕರು ಸುಮ್ಮನಿಲ್ಲ. ಹೈಕಮಾಂಡ್ ನವರಿಗೂ ಇದರ ಸ್ಪಷ್ಟತೆ ಇಲ್ಲಾ. ಸಿಎಂ ಸಿದ್ದರಾಮಯ್ಯ ಅವರ ಹಿನ್ನೆಲೆ ಮತ್ತು ಇಮೇಜ್ ಬಗ್ಗೆ ಯೋಚನೆ ಮಾಡುತ್ತಿದ್ದಾರೆ‌.  ಡಿಸಿಎಂ ಶಿವಕುಮಾರ್ ಪಕ್ಷ ಕಟ್ಟಿದ್ದಾರೆ ಅವರ ಬಗ್ಗೆಯೂ ಯೋಚನೆ ಮಾಡಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ. ಕ್ರಾಂತಿ ನವೆಂಬರ್ ನಲ್ಲಿ ಆಗುತ್ತದೊ ಡಿಸೆಂಬರ್ ನಲ್ಲಿ ಆಗುತ್ತದೊ ಕಾದುನೋಡಬೇಕು ಎಂದು ಹೇಳಿದರು.

ಕೇಂದ್ರದ ಅನುದಾನದಿಂದ ಅಭಿವೃದ್ಧಿ

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14 ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೊಟಿ ಹೆಚ್ಚಿಗೆ ಕೊಟ್ಟಿದೆ. ಯುಪಿಎ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7 ಸಾವಿರ ಕೋಟಿ ರೂ. ಬಂದಿತ್ತು. ಈಗ ಪ್ರತಿ ವರ್ಷ ಏಳು ಸಾವಿರ ಕೊಟಿ ಬರುತ್ತಿದೆ. 6 ಸಾವಿರ ಕಿ.ಮೀ. ಹೈವೆ ಆಗುತ್ತಿದೆ. ರಾಜ್ಯದಲ್ಲಿ ಕೇಂದ್ರದ ಅನುದಾನದಿಂದಲೇ ಯೋಜನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳಿದರು.

ಸೌಜನ್ಯ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಅವಳಿಗೆ ನ್ಯಾಯ ಸಿಗಬೇಕು ಅಷ್ಟೆ ಎಂದು ಹೇಳಿದರು.

ಸಮೀಕ್ಷೆಗೆ ಮಹತ್ವ ಇಲ್ಲ

ಸಾಮಾಜಿಕ ಆರ್ಥಿಕ ಸಮೀಕ್ಷೆಯಿಂದ ಮಕ್ಕಳು ಮತ್ತು ಶಿಕ್ಷಕರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ಸಮೀಕ್ಷೆ ನಡೆಯುತ್ತಿಲ್ಲ. ಬಹಳಷ್ಟು ಜನ ಮನೆಯಲ್ಲಿ ಇರುವುದಿಲ್ಲ. ಸಹಕಾರ ನೀಡುತ್ತಿಲ್ಲ ಹೀಗಾಗಿ ಈ ಸಮೀಕ್ಷೆಗೆ ಯಾವುದೇ ಮಹತ್ವ ಉಳಿದಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

BIG BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ | Karnataka 2nd PU Results

08/04/2026 3:56 PM1 Min Read

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

08/04/2026 3:55 PM2 Mins Read

ಬಳ್ಳಾರಿಯಲ್ಲಿ ರೈಲ್ವೆ ಪೊಲೀಸರ ಭರ್ಜರಿ ಬೇಟೆ; ರೈಲಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ 40 ಕೆಜಿ ಗಾಂಜಾ ವಶ

08/04/2026 3:45 PM1 Min Read
Recent News

BIG BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ | Karnataka 2nd PU Results

08/04/2026 3:56 PM

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

08/04/2026 3:55 PM

ಬಳ್ಳಾರಿಯಲ್ಲಿ ರೈಲ್ವೆ ಪೊಲೀಸರ ಭರ್ಜರಿ ಬೇಟೆ; ರೈಲಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ 40 ಕೆಜಿ ಗಾಂಜಾ ವಶ

08/04/2026 3:45 PM

ಅಮೆಜಾನ್ ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್: 14,000 ಉದ್ಯೋಗಿಗಳ ವಜಾಕ್ಕೆ ಸಿದ್ಧತೆ? | Amazon layoff

08/04/2026 3:41 PM
State News
KARNATAKA

BIG BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ದ್ವಿತೀಯ PUC ಪರೀಕ್ಷೆ-1ರ ಫಲಿತಾಂಶ ಪ್ರಕಟ | Karnataka 2nd PU Results

By kannadanewsnow0908/04/2026 3:56 PM KARNATAKA 1 Min Read

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುವುದು. ಫಲಿತಾಂಶ…

BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ

08/04/2026 3:55 PM

ಬಳ್ಳಾರಿಯಲ್ಲಿ ರೈಲ್ವೆ ಪೊಲೀಸರ ಭರ್ಜರಿ ಬೇಟೆ; ರೈಲಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ 40 ಕೆಜಿ ಗಾಂಜಾ ವಶ

08/04/2026 3:45 PM

BREAKING : ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು : 60 ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿ!

08/04/2026 3:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.