ಬೆಂಗಳೂರು : ಇತ್ತೀಚಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನಲ್ಲಿ SBI ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ತನಿಖೆ ದೃಷ್ಟಿಯಿಂದ ಆರೋಪಿಗಳ ಹೆಸರು, ಮತ್ತು ಮಾಹಿತಿಯನ್ನು ಗೌಪ್ಯವಾಗಿಸಿದ್ದಾರೆ.
ಸದ್ಯಕ್ಕೆ 9 ಕೆಜಿ ಚಿನ್ನ 86.31 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಡಚಣ SBI ಬ್ಯಾಂಕ್ ದರೋಡೆಗೆ ಆರೋಪಗಳಿಗೆ ನೇರವಾಗಿದ್ದ ಬಿಹಾರ ಮೂಲದ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ರಾಕೇಶ್ ಕುಮಾರ್ ಸಹಾನಿ (22) ರಾಜಕುಮಾರ ಪಾಸ್ವನ್ (21) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.