ಬೆಂಗಳೂರು: ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ 5 ಕೆಜಿ ಅಕ್ಕಿಯ ಬದಲಾಗಿ ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮುಂದಿನ ತಿಂಗಳಿನಿಂದ ರೇಷನ್ ಕಾರ್ಡ್ ಬದಲಾಗಿ ಆಹಾರ ಕಿಟ್ ನೀಡಲು ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸೇತುವೆಗಳು ಪುನರ್ ನಿರ್ಮಾಣ ಹಾಗೂ ಪುನಶ್ವೇತನ ಕಾಮಗಾರಿಗಳನ್ನು ರೂ. 2000 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತಾತ್ವಿಕ ಅನುಮೋದನೆ ಹಾಗೂ ಮೊದಲನೇ ಹಂತದಲ್ಲಿ PRAMC ಅಧ್ಯಯನದಲ್ಲಿ ಗುರುತಿಸಿರುವ 39 ಬೃಹತ್ ಸೇತುವೆಗಳ ಪುನರ್ ನಿರ್ಮಾಣ/ನಿರ್ಮಾಣ ಕಾಮಗಾರಿಗಳನ್ನು ರೂ.1000 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರಿವೋಬನಹಳ್ಳಿಯಿಂದ ವತಿಯಿಂದ ನಾಗಸಂದ್ರ ಹೊಸ ಬಳಸಿದ ನೀರು ಸಂಸ್ಕರಣಾ ಘಟಕದವರೆಗೆ ಇರುವ ರೈಸಿಂಗ್ ಮೇನ್ ಸೇರಿ ನಾಗಸಂದ್ರದಲ್ಲಿ 20 MLD ಬಳಸಿದ ನೀರು ಸಂಸ್ಕರಣಾ ಘಟಕ (UWTP) ಮತ್ತು 5 MLD ಮಧ್ಯಂತರ ತ್ಯಾಜ್ಯ ನೀರಿನ ಯಂತ್ರಾಗಾರಗಳ 05 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.26.02 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದಿಸಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ತಡೆಗಟ್ಟುವ ಸಲುವಾಗಿ 52-54 ಮೀಟರ್ ಎತ್ತರಕ್ಕೆ ತಲುಪುವ Aerial Ladder Platform Vehicleನ್ನು 16.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಿದೆ.
ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ವಾಯತ್ತ ಸ್ಥಾನಮಾನದೊಂದಿಗೆ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಬಿಸಲು ಮತ್ತು ಅವ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, 300 ಹಾಸಿಗೆಗಳ ಬೋಧನಾ ಆಸ್ಪತ್ರೆ, ವಸತಿ ನಿಲಯಗಳು ಮತ್ತಿತರ ಕಾಮಗಾರಿಗಳನ್ನು ರೂ.550 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.