ಬೆಂಗಳೂರು: ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 2025-26ನೇ ಸಾಲಿನ ರಸಗೊಬ್ಬರ ಕಾಪು ದಾಸ್ತಾನು ಮಾಡಲು ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿರವರು ಪಡೆಯುವ ತಲಾ 200 ಕೋಟಿಗಳ ಬಂಡವಾಳ ಸಾಲಕ್ಕೆ ಸರ್ಕಾರ ಖಾತ್ರಿ ನೀಡಲು ಒಪ್ಪಿಗೆ ನೀಡಲಾಗಿದೆ.
“ಜಲಾನಯನ ಅಭಿವೃದ್ಧಿ ಘಟಕ-ಪ್ರಧಾನ ಮಂತ್ರಿ ಕೃಷಿ ಸಿಂಚಯಿ ಯೋಜನೆ 2.0 (PMKSY-WDC 2.0) ಯೋಜನೆಯಡಿ ಹೆಚ್ಚುವರಿ 15 ಯೋಜನೆಗಳನ್ನು ರಾಜ್ಯದ 15 ತಾಲ್ಲೂಕುಗಳಲ್ಲಿ 39413 ಹೆಕ್ಟೇರ್ ಪ್ರದೇಶದಲ್ಲಿ ಯೋಜನಾ ಮೊತ್ತ ರೂ.90.07 ಕೋಟಿಗಳಲ್ಲಿ (ಕೇಂದ್ರ ಮತ್ತು ರಾಜ್ಯ ಸರ್ಕಾರ -ಶೇ.60:40) ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಒಪ್ಪಿಗೆ ಸೂಚಿಸಿದೆ.
ರಾಜ್ಯ ಸಿವಿಲ್ ಸೇವೆ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳನ್ನು ಸಡಿಲಿಸಿ ದಿನಾಂಕ: 29.09.2025 ರಂದು ಹೊರಡಿಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲು ಒಪ್ಪಿಗೆ ನೀಡಲಾಗಿದೆ.