ಬೆಂಗಳೂರು: ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಇನ್ಮುಂದೆ ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಇಂದು ರಾಜ್ಯ ಸಚಿವ ಸಂಪುಟದ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಸಂಪುಟದ ನಿರ್ಧಾರಗಳನ್ನು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಋತುಚಕ್ರ ರಜೆ ನೀಡಲು ಸಂಪುಟ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ, ಖಾಸಗಿ ನೌಕರರಿಗೆ ಅನ್ವಯ ಆಗಲಿದೆ. ಗಾರ್ಮೆಂಟ್ಸ್, ಕೈಗಾರಿಕೆಗಳಿಗೂ ಅನ್ವಯಿಸಲಿದೆ. ಹೆಣ್ಣುಮಕ್ಕಳಿಗೆ ಒಂದು ದಿನ ರಜೆ ನೀಡಲು ಒಪ್ಪಿಗೆ ನೀಡಲಾಗಿದೆ. ಉದ್ಯೋಗ ಮಾಡುವ ಮಹಿಳೆಯರಿಗೆ ಅನುಕೂಲವಾಗಲಿದೆ. ವೇತನ ಸಹಿತ ಒಂದು ದಿನದ ರಜೆ ಸಿಗಲಿದೆ ಎಂದರು.
ಕ್ಯಾಬಿನೆಟ್ ಸಭೆಯ ಬಳಿಕ ಮಾತನಾಡಿದ ಸಚಿವ ಸಂತೋಷ ಲಾಡ್, ಹೆಣ್ಣು ಮಕ್ಕಳಿಗೆ ಋತು ಚಕ್ರ ರಜೆ ನೀಡಲು ಕ್ಯಾಬಿನೆಟ್ ನಲ್ಲಿ ಒಪ್ಪಿಗೆ ಆಗಿದೆ. ವರ್ಷದಲ್ಲಿ 12 ದಿನ ರಜೆ ಸಂಬಳ ಸಹಿತ ಕೊಡಲಾಗುತ್ತದೆ. ತಿಂಗಳಲ್ಲಿ ಋತುಚಕ್ರವಾದಾಗ ಯಾವ ದಿನ ಬೇಕಾದರೂ ಒಂದು ದಿನ ರಜೆ ತೆಗೆದುಕೊಳ್ಳಬಹುದು ಎಂದರು.
ಕಾನೂನು ಇಲಾಖೆ ಜೊತೆ ಚರ್ಚೆ ಸೇರಿ ಅನೇಕ ಚರ್ಚೆಗಳು ಆಗಿದೆ. ಯಾವತ್ತು ರಜೆ ಬೇಕು ಅಂತ ಹೆಣ್ಣುಮಕ್ಕಳು ತೀರ್ಮಾನ ಮಾಡಿಕೊಳ್ಳಬೇಕು. ಹೆಣ್ಣು ಮಕ್ಕಳ ಪರ ಸರ್ಕಾರ ಈ ಮಹತ್ವದ ನಿರ್ಧಾರ ಮಾಡಿದೆ. ಕ್ಯಾಬಿನೆಟ್ ನಲ್ಲಿ ಒಪ್ಪಿಗೆಯಾಗಿದ್ದು, ಆದಷ್ಟೂ ಬೇಗ ಬಿಲ್ ತಂದು ದೊಡ್ಡ ಕಾರ್ಯಕ್ರಮ ಮಾಡಿ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.
ಎಲ್ಲಾ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಅನುಮೋದನೆ
BIG NEWS: ರಾಜ್ಯದಲ್ಲಿ ‘ಪಡಿತರ ಚೀಟಿದಾರ’ರಿಗೆ 5 ಕೆಜಿ ಅಕ್ಕಿ ಬದಲು ʻಇಂದಿರಾ ಆಹಾರ ಕಿಟ್ʼ: ಸಂಪುಟದ ಮಹತ್ವ ನಿರ್ಧಾರ