ಮಾನ್ವಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನಲ್ಲಿರುವ ಗ್ರಾಮವೊಂದರಲ್ಲಿ ಮೂವರು ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅನಾರೋಗ್ಯ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಈ ಸಂಗತಿ ತಿಳಿಸಿದ್ದಾರೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಮುಸುಕುಧಾರಿಗಳು ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾಳೆ. ಘಟನೆ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.