ಮೈಸೂರು : ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ವಲಸೆ ಬಂದಿದ್ದ 10 ವರ್ಷದ ಬಾಲಕಿಯನ್ನು ಅಮಾನುಷವಾಗಿ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿಸಿ ಕ್ಯಾಮರಾ ದೃಶ್ಯದ ಸುಳಿವಿನ ಮೇಲೆ ಕಾರಾಚರಣೆ ಕೈಗೊಂಡ ಪೊಲೀಸರು ಕೊಳ್ಳೇಗಾಲದಲ್ಲಿ ಆರೋಪಿ ಕಾರ್ತಿಕ್ನನ್ನು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕುಟುಂಬ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಮೈಸೂರಿಗೆ ಬಂದಿದ್ದವು. ಇವರೆಲ್ಲರೂ ಮೈಸೂರು ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದ ಬಯಲಿನಲ್ಲಿ ತಂಗಿದ್ದರು. ಚಾಮುಂಡಿಬೆಟ್ಟ, ದಸರಾ ವಸ್ತುಪ್ರದರ್ಶನ, ದೇವರಾಜ ಮಾರುಕಟ್ಟೆ ಸೇರಿ ಹಲವು ಸ್ಥಳಗಳಲ್ಲಿ ಬಲೂನ್ ಮಾರುತ್ತಿದ್ದರು.
ಬುಧವಾರ ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ವ್ಯಾಪಾರ ಮುಗಿಸಿಕೊಂಡು ಬಂದಿದ್ದ ಬಾಲಕಿ, ಪಾಲಕರೊಂದಿಗೆ ಮಲಗಿದ್ದಳು. ಮಧ್ಯರಾತ್ರಿ ವೇಳೆ ಸ್ಥಳಕ್ಕೆ ಬಂದ ದುಷ್ಕರ್ಮಿ ಸ್ಥಳದಿಂದ ಅಪಹರಿಸಿದ್ದಾನೆ. ದೊಡ್ಡ ಮೋರಿಯ ಬಳಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ಶವವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಪಾರ್ಥಿವ ಶರೀರವನ್ನು ಪಾಲಕರಿಗೆ ಹಸ್ತಾಂತರಿಸಲಾಗಿದೆ.
ಕೃತ್ಯ ಎಸಗಿದ್ದ ವಿಕೃತ ಕಾಮುಕ ಮೈಸೂರಿನ ಖಾಸಗಿ ಬಸ್ ನಿಲ್ದಾಣದಿಂದ ಕೊಳ್ಳೇಗಾಲಕ್ಕೆ ಹೋಗಿದ್ದ. ಇತ್ತ ಸಿಸಿಟಿವಿ ದೃಶ್ಯಾವಳಿಗಳನ್ನ ಆಧರಿಸಿ ತನಿಖೆ ನಡೆಸುತ್ತಿದ್ದ ಪೊಲೀಸರು ಕೊಳ್ಳೇಗಾಲದಲ್ಲಿ ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ. ಬಾಲಕಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಆರೋಪಿ ಮೈಸೂರಿಗೆ ಕರೆತರುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಬಳಿಕ ಕರೆತಂದು ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಜರ್ಬಾದ್ ಪೊಲೀಸ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.