ಕಾಬೂಲ್ ಸ್ಫೋಟ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಗುರುವಾರ ಸಂಜೆ ಒಂದು ಅಥವಾ ಹೆಚ್ಚಿನ ದೊಡ್ಡ ಸ್ಫೋಟಗಳು ಕೇಳಿಬಂದಿವೆ ಎಂದು ತಾಲಿಬಾನ್ ಆಡಳಿತ ಮತ್ತು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಮಾತುಕತೆಗಾಗಿ ಭಾರತಕ್ಕೆ ಬಂದಿಳಿದ ನಂತರ ಕಾಬೂಲ್ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯ ವರದಿ ಬಂದಿದೆ.
ನಾಲ್ಕು ವರ್ಷಗಳ ಹಿಂದೆ ಅಶ್ರಫ್ ಘನಿ ಸರ್ಕಾರದ ಪತನದ ನಂತರ ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡ ನಂತರ ಕಾಬೂಲ್ನಿಂದ ಇದು ಮೊದಲ ಉನ್ನತ ಮಟ್ಟದ ಪ್ರವಾಸವಾಗಿದೆ