ಕಾಬೂಲ್ : ತಾಲಿಬಾನ್ ಆಳ್ವಿಕೆಯ ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಗುರುವಾರ ರಾತ್ರಿ ಪಾಕಿಸ್ತಾನವು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ವಾಯುದಾಳಿ ನಡೆಸಿದೆ ಎಂಬ ವರದಿಗಳು ಬರುತ್ತಿವೆ.
ಗಡಿಯುದ್ದಕ್ಕೂ ಭಯೋತ್ಪಾದಕ ಶಿಬಿರಗಳನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಕಠಿಣ ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳ ನಂತರ ಈ ದಾಳಿಗಳು ನಡೆದಿರುವುದು ಗಮನಾರ್ಹ. ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ ಎಂದು ಅಫ್ಘಾನ್ ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ, ಆದರೆ ಯಾವುದೇ ಹಾನಿಯ ವರದಿಯಾಗಿಲ್ಲ ಎಂದು ಪಾಕಿಸ್ತಾನಿ ಸುದ್ದಿ ಸಂಸ್ಥೆ DAWN ವರದಿ ಮಾಡಿದೆ. “ಕಾಬೂಲ್ ನಗರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ಆದಾಗ್ಯೂ, ಯಾರೂ ಚಿಂತಿಸಬೇಕಾಗಿಲ್ಲ. ಎಲ್ಲವೂ ಚೆನ್ನಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ… ಇಲ್ಲಿಯವರೆಗೆ ಯಾವುದೇ ಹಾನಿಯ ವರದಿಗಳಿಲ್ಲ” ಎಂದು ಅವರು ಹೇಳಿದರು.
ಏತನ್ಮಧ್ಯೆ, ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಹಿದಾ ಅವರು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಪ್ರಮುಖ ಮಾತುಕತೆ ನಡೆಸಲು ಭಾರತಕ್ಕೆ ಬರುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂತಹ ಸಮಯದಲ್ಲಿ, ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ದಾಳಿಗಳು ಸಹ ಚರ್ಚೆಯ ವಿಷಯವಾಗಿದೆ.
ಟಿಟಿಪಿ ಮುಖ್ಯಸ್ಥ ನೂರ್ ವಾಲಿ ಮೆಹ್ಸೂದ್ ಅವರನ್ನು ಈ ದಾಳಿಗಳಲ್ಲಿ ನಿರ್ದಿಷ್ಟವಾಗಿ ಗುರಿಯಾಗಿರಿಸಿಕೊಳ್ಳಲಾಗಿದೆ ಎಂದು ವರದಿಗಳು ಸೂಚಿಸುತ್ತವೆ. ಆತ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
⚡️ Airstrikes SHAKE Kabul – fighter jets heard over Afghan capital
Nobody’s claimed responsibility yet, but Pakistan accused Taliban of sheltering terrorists earlier today
Defense Minister Asif said patience with Taliban ‘has now reached its limit’ pic.twitter.com/TdpzKij2hp
— RT (@RT_com) October 9, 2025
Breaking: Two loud explosions were heard in #Kabul, followed by a series of gunfire. Unconfirmed reports suggest the sounds came from the eastern side of the city, around District 8. Other reports indicate that the noise of aircrafts can also be heard over the city. More details… pic.twitter.com/sSIWjsLaik
— Kabir Haqmal🇦🇫 (@Haqmal) October 9, 2025
A Kabul resident says that unknown jets carried out strikes on several locations in the city and the sound of explosions woke people up.
Many people are Reporting PAK conducted Air strike
Kabul, Afghanistan pic.twitter.com/MWXoL3jZjc— Military Observer (@MilitaryObs2222) October 9, 2025