ಮೈಸೂರು : ಮೈಸೂರಿನಲ್ಲಿ ಅತ್ಯಾಚಾರ ಎಸಗಿ 9 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಒಂದರ ಹಿಂದೆ ಒಂದು ಕೊಲೆಯಾಗುತ್ತಿದೆ ಮೈಸೂರಿನಲ್ಲಿ ಏನಾಗಿದೆ? ಮೈಲಾರಿ ದೋಸೆ ತಿನ್ನಲು ಅಷ್ಟೇ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದೀರಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.
ಪ್ರಕರಣದ ಬಗ್ಗೆ ಸರ್ಕಾರದ ಯಾರೊಬ್ಬರೂ ಸಹ ಯಾಕೆ ಧ್ವನಿ ಎತ್ತಿಲ್ಲ? ರಾಜ್ಯ ಸರ್ಕಾರದಲ್ಲಿ ಕೂಗು ಮಾರಿಗಳಿದ್ದಾರೆ. ಉಕ್ರೇನ್ ರಷ್ಯಾ ಯುದ್ಧದ ಬಗ್ಗೆ ಕಮೆಂಟ್ ಮಾಡುತ್ತಾರೆ. ಕಾಂಗ್ರೆಸ್ ಅವರು ಡೊನಾಲ್ಡ್ ಟ್ರಂಪ್ ಬಗ್ಗೆ ಮಾತನಾಡುತ್ತಾರೆ. ಬಾಲಕಿ ಕೋಲೆ ಪ್ರಕರಣದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಪ್ರಿಯಾಂಕ್ ಖರ್ಗೆ ಸಂತೋಷ ಲಾಡ್ ಒಬ್ಬನಾದರೂ ಬಾಯಿ ತೆರೆಯುತ್ತಿದ್ದಾರ? ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಈ ಕುರಿತು ಏಕೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರೇ ಯಾವ ಪುರುಷಾರ್ಥಕ್ಕೆ ನೀವು ಸಿಎಂ ಆಗಿದ್ದೀರಾ? ಪೊಲೀಸರಿಗೆ ದಕ್ಷತೆ ಇದೆ ಕೆಲಸ ಮಾಡಲು ಮುಕ್ತ ವಾತಾವರಣವಿಲ್ಲ. ಮೈಲಾರಿ ದೋಸೆ ತಿನ್ನಲು ಅಷ್ಟೇ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದೀರಿ ಮಹದೇವಪ್ಪ ಸಂವಿಧಾನ ಪೀಠಿಕೆ ಓದೋದು ಬಿಟ್ಟರೆ ಏನು ಮಾಡುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಹೃದಯ ಕಲ್ಲಾಗಿದೆ. ಎಂದು ಪ್ರತಾಪ್ ಸಿಂಹ ಆಕ್ರೋಶ ಹೊರಹಾಕಿದರು.