ಬೆಂಗಳೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವಂತ ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಆರೋಗ್ಯ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿಯಂತೆ ಹಿರಿಯ ನಟ ಉಮೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಸ್ಯಾಂಡಲ್ ವುಡ್ ಹಿರಿಯ ನಟ ಉಮೇಶ್ ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಂದು ಅವರು ಮನೆಯಲ್ಲಿ ದಿಢೀರ್ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಆ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ಹೀಗಾಗಿ ಅವರನ್ನು ಬೆಂಗಳೂರಿನ ಶಾಂತಾ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ.
BREAKING: ಕೆನ್ಯಾದ ಮೊದಲ ಮಹಿಳಾ ಪ್ರಾಧ್ಯಾಪಕಿ ವಂಗಾರಿ ಮಾಥೈಗೆ 2025ರ ನೋಬೆಲ್ ಶಾಂತಿ ಪ್ರಶಸ್ತಿ
ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್; ಏನಿದರ ವಿಶೇಷತೆ, ಪ್ರಯೋಜನ?