ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಆರೋಪಿಗಳಾದಂತ ಕೆ.ಪ್ರಮೋದ್, ಮಂಜುನಾಥ್, ರಾಜೇಶ್ ಸಿವೈ, ಓಬಣ್ಣ.ಟಿ, ಗಂಗಾಧರ್.ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಇನ್ನೂ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಲಾಗಿತ್ತು.
‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’