ಶಿವಮೊಗ್ಗ: ವಿದ್ಯಾರ್ಥಿಗಳು ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರನ್ನ ಗೌರವಿಸಬೇಕು. ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬದುಕು ಕಟ್ಟಿಕೊಳ್ಳಲು ಅಣಿಯಾಗಬೇಕು ಎಂಬುದಾಗಿ ಹೊಸನಗರ ತಾಲ್ಲೂಕು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ತಿಳಿಸಿದರು.
ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ನಿಟ್ಟೂರಿನ ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿಟ್ಟೂರು ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದಂತ ಹೋಬಳಿ ಮಟ್ಟದ 17 ವರ್ಷದೊಳಗಿನ ಪ್ರೌಢ ಶಾಲಾ ಕ್ರೀಡಾಕೂಟವನ್ನು ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ಉದ್ಘಾಟಿಸಿದ ಮಾತನಾಡಿದಂತ ಅವರು, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಹೇಗೆ ಬೀರುತ್ತದೆ ಎಂಬುದನ್ನು ಮನಮುಟ್ಟುವಂತೆ ತಿಳುಹಿಸಿಕೊಟ್ಟರು.
ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಮಾತನಾಡಿ ಈ ಭಾಗದ ಯುವಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಕನಸಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಕುರಿತು ಶಾಸಕ ಗೋಪಾಲಕೃಷ್ಣ ಬೇಳೂರು ಅವರೊಂದಿಗೆ ಮಾತನಾಡಿ ಅನುದಾನ ತರುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಈ ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೂರು ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಾವತಿ ಶೆಟ್ಟಿ, ಸದಸ್ಯರಾದ ಶೋಭಾ ಉದಯ್ ಕುಮಾರ್, ಪುರುಷೋತ್ತಮ್ ಶ್ಯಾನುಭಾಗ್, ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜೆ.ವಿ ಸುಬ್ರಮಣ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲ ಕಟ್ಟಿನಹೊಳೆ, ನಿಟ್ಟೂರು ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ, ತಾಲೂಕು ದೈವಿಕ ಶಿಕ್ಷಣ ಪರಿವೀಕ್ಷಕರಾದ ವಿನಯ್ ಭಾಗವಹಿಸಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜ್ಞಾ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷರಾಗಿರುವ ಶ್ರೀಕಾಂತ್ ಅಟ್ಟಳ್ಳಿ ವಹಿಸಿದ್ದರು. ಉದ್ಘಾಟನಾ ಸಂದರ್ಭದಲ್ಲಿ ನಿಟ್ಟೂರಿನ ಹಿರಿಯ ಕ್ರೀಡಾಪಟು ವಾಲಿಬಾಲ್ ತರಬೇತುದಾರ ಲಕ್ಮನೆ ರಾಧಾಕೃಷ್ಣ ಅವರನ್ನು ಸನ್ಮಾನಿಸಲಾಯಿತು.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’