ಹಾಸನ: ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಹಲವು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹೀಗೆ ನಿಯೋಜಿಸಲಾಗಿದ್ದಂತ ಇಬ್ಬರು ಅಧಿಕಾರಿಗಳು ತಮಗೆ ನೀಡಿದ್ದಂತ ಐಡಿ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದರು. ಇಂತಹ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಹಾಸನ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಾಸನಾಂಬ ದೇವಿ ದರ್ಶನ, ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ನಿಯೋಜಿಸಿದ್ದ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದರು. ಕರ್ತವ್ಯದ ಸಲುವಾಗಿ ನೀಡಿದ್ದ ಗುರುತಿನ ಚೀಟಿ ದುರ್ಬಳಕೆ ಮಾಡಿಕೊಂಡಿದ್ದಂತ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ತಮ್ಮ ಐಡಿ ನೀಡಿದ್ದಂತ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ಗಳಾದಂತ ರಮೇಶ್, ಆನಂದ್ ಎಂಬುವರನ್ನು ಅಮಾನತುಗೊಳಿಸಿ ಹಾಸನ ಡಿಸಿ ಕೆ.ಎಸ್ ಲತಾ ಕುಮಾರಿ ಆದೇಶಿಸಿದ್ದಾರೆ.
‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9.15 ಲಕ್ಷ ಕುಟುಂಬಗಳ ಸಮೀಕ್ಷೆ