Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!
KARNATAKA

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

By kannadanewsnow57

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ 144 ರನ್ವಯ ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3691 ಹುದ್ದೆಗಳ ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ಆಯವ್ಯಯ ಭಾಷಣ ಕಂಡಿಕೆ-144 ರಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ.

ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಆದೇಶದಲ್ಲಿ ಈ ಆಯವ್ಯಯ ಘೋಷಣೆಯನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108-ಆರೋಗ್ಯ ಕವಚ ಸೇವೆಯನ್ನು ಒಡಂಬಡಿಕೆಯ ಪಾಲುದಾರರಾದ GVK-EMRI ಸಂಸ್ಥೆ (ಪ್ರಸ್ತುತ EMRI GHS) ಸಂಸ್ಥೆಯಿಂದ ಹಿಂಪಡೆದು, ಈ ಸೇವೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲು ಸರ್ಕಾರದ ವತಿಯಿಂದ ರಾಜ್ಯ ಮಟ್ಟದಲ್ಲಿ 112 NG ERSS ತಂತ್ರಾಂಶವನ್ನು ಬಳಸಿಕೊಂಡು ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಅನ್ನು ಸ್ಥಾಪಿಸಲು ಹಾಗೂ ಜಿಲ್ಲಾಡಳಿತದ ಮುಖಾಂತರ ಆಂಬ್ಯುಲೆನ್ಸ್ ಗಳ ವಿಕೇಂದ್ರಿಕೃತವಾಗಿ ನಿರ್ವಹಣೆ ಮಾಡಲು ಹಾಗೂ ಈ ಯೋಜನೆಯನ್ನು 2025-26 ನೇ ಸಾಲಿನ ಅನುಮೋದಿತ ಅನುದಾನದ ಮಿತಿಯೊಳಗೆ ಅನುಷ್ಠಾನ ಮಾಡಲು ಹಾಗೂ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿರುವ ಮಾನವ ಸಂಪನ್ಮೂಲ ಪಡೆಯಲು ಪ್ರತ್ಯೇಕ ಪುಸ್ತಾವನೆ ಹಾಗೂ ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯ (Meity)ದಡಿಯಲ್ಲಿನ C-DAC ತಿರುವಂತಪುರಂ ಸಂಸ್ಥೆಯ ಜೊತೆ ಒಡಂಬಡಿಕೆಯನ್ನು ಮಾಡಿಕೊಂಡು 112 NG-ERSS ತಂತ್ರಾಂಶ ಬಳಸಿಕೊಂಡು ರಾಜ್ಯದಲ್ಲಿ 108-ಆರೋಗ್ಯ ಕವಚ ಹಾಗೂ 104-ಆರೋಗ್ಯ ಸಹಾಯವಾಣಿ ಕಾರ್ಯಕ್ರಮಗಳ ಕೇಂದ್ರೀಕೃತ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ನ್ನು ಐದು ವರ್ಷಗಳ ಅವಧಿಗೆ ಸ್ಥಾಪಿಸಲು ಕೆಟಿಪಿಪಿ ಕಾಯ್ದೆ ಕಲಂ 4(g) ವಿನಾಯಿತಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಆದೇಶಿಸಲಾಗಿದೆ. ಮುಂದುವರೆದು ಯೋಜನೆಯ ಅನುಷ್ಠಾನಕ್ಕೆ ವಿವರವಾದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಕ್ಷಮ ಪ್ರಾಧಿಕಾರದಿಂದ ತಾಂತ್ರಿಕ ಹಾಗೂ ಆಡಳಿತಾತ್ಮಕ ಅನುಮೋದನೆ ಪಡೆಯಲು ಆದೇಶಿಸಲಾಗಿದೆ.

ಮೇಲೆ ಕ್ರಮ ಸಂಖ್ಯೆ (3) ರಲ್ಲಿ ಆದೇಶದಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸಲು 108 – ಆರೋಗ್ಯ ಕವಚ ಹಾಗೂ 104 – ಆರೋಗ್ಯ ಸಹಾಯವಾಣಿ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಅನ್ನು ಸರ್ಕಾರದ ಅಧೀನಕ್ಕೆ ಪಡೆದು ನಿರ್ವಹಿಸುವ ಉದ್ದೇಶದಿಂದ ಮಾನವ ಸಂಪನ್ಮೂಲ, ಉಪಕರಣಗಳು ಮತ್ತು ಸೇವೆಗಳನ್ನು ಖರೀದಿ / ಸಂಗ್ರಹಣೆ ಮಾಡುವ ಸಂಬಂಧವಾಗಿ ನಿರ್ದೇಶಕರು, ಕರ್ನಾಟಕ ಹೆಲ್ತ್ ಡಿಜಿಟಲ್ ಸೊಸೈಟಿ (KHDS) ಹಾಗೂ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಅಧಿಕಾರಿಗಳಿಗೆ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಿ, ಆದೇಶದಲ್ಲಿ ತಿಳಿಸಿರುವ ಕ್ರಮಗಳನ್ನು ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ಪಡೆದ ನಂತರವೇ ನಿಯಮಾನುಸಾರ ಅಂತಿಮಗೊಳಿಸಲು ಆದೇಶಿಸಲಾಗಿದೆ.

ಮೇಲೆ ಕ್ರಮ ಸಂಖ್ಯೆ (4) ರಲ್ಲಿ ಓದಲಾದ ಏಕಕಡತದಲ್ಲಿ ಹಾಗೂ ಸರ್ಕಾರದ ಕಡತ ಸಂಖ್ಯೆ ಆಕುಕ 180 ಸಿಜಿಇ 2025ರ ಕೇಂದ್ರಿಕೃತ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್, ಜಿಲ್ಲಾ ಕಂಟ್ರೋಲ್ ರೂಮ್ ಸ್ಥಾಪಿಸಲು ಹಾಗೂ ಆಂಬ್ಯುಲೆನ್ಸ್ ನಿರ್ವಹಣೆಗೆ ಬೇಕಾದ ಅಗತ್ಯ ಮಾನವ ಸಂಪನ್ಮೂಲವನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವುದಾಗಿ ಪ್ರಸ್ತಾಪಿಸಲಾಗಿರುತ್ತದೆ ಹಾಗೂ ಅಗತ್ಯ ಮಾನವ ಸಂಪನ್ಮೂಲವನ್ನು ಪಡೆಯಲು ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸಬೇಕಾಗಿರುತ್ತದೆ. ಅದರಂತೆ ಮಾನವ ಸಂಪನ್ಮೂಲಗಳ, ಅವರ ವಿದ್ಯಾರ್ಹತೆ, ಅನುಭವ, ನೇಮಕಾತಿಯ ವಿಧಾನ, ಅಂದಾಜು ವೆಚ್ಚದ ವಿವರಗಳನ್ನು ಕೆಳಕಂಡ ಅನುಬಂಧ-01 ಮತ್ತು 02ರಲ್ಲಿ ಸಲ್ಲಿಸಿ, ಮಾನವ ಸಂಪನ್ಮೂಲದ ನಿರ್ವಹಣೆಗೆ ತಗಲುವ ವೆಚ್ಚವನ್ನು ರಾಜ್ಯ ಸರ್ಕಾರದ ಲೆಕ್ಕ ಶೀರ್ಷಿಕೆ 2210-06-200-0-01 ಭರಿಸಲಾಗುವುದು. ಪ್ರಸ್ತಾಪಿಸಲಾದ ಮಾನವ ಸಂಪನ್ಮೂಲವನ್ನು ಹಾಲಿ ನಿರ್ವಹಿಸಲಾಗುತ್ತಿರುವ ಆಂಬ್ಯುಲೆನ್ಸ್ ಮತ್ತು ಕಂಟ್ರೋಲ್ ಕೇಂದ್ರಕ್ಕೆ ಅನುಗುಣವಾಗಿ ಅಂದಾಜಿಸಲಾಗಿದೆ ಎಂದು ತಿಳಿಸಿರುತ್ತಾರೆ.

ಮುಂದುವರೆದು, ರಾಜ್ಯದಲ್ಲಿ ಮೊದಲನೇ ಬಾರಿಗೆ 108-ಆರೋಗ್ಯ ಕವಚ ಹಾಗೂ 104-ಆರೋಗ್ಯ ಸಹಾಯವಾಣಿ ಕಾರ್ಯಕ್ರಮವನ್ನು ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗಿದ್ದು ಪ್ರಾಥಮಿಕ ಹಂತದಲ್ಲಿ ಅನುಷ್ಠಾನಗೊಳಿಸಲು ಅಂದಾಜಿಸಲಾದ ಮಾನವ ಸಂಪನ್ಮೂಲವನ್ನು ಪ್ರಸ್ತಾಪಿಸಲಾಗಿದೆ ಹಾಗೂ ತುರ್ತು ವೈದ್ಯಕೀಯ ಸೇವೆಗಳ ನಿರ್ದೇಶನಾಲಯ / ಕೇಂದ್ರ ಸ್ಥಾಪಿಸಿದ ಹಾಗೂ ಕಾರ್ಯಕ್ರಮವನ್ನು ಅನುಷ್ಠಾನಗೊಂಡ ನಂತರ ಅವಶ್ಯಕತೆಗೆ ಅನುಗುಣವಾಗಿ ಈ ಕೆಳಕಂಡ ಮಾನವ ಸಂಪನ್ಮೂಲವನ್ನು ಹಾಗೂ ಇದಕ್ಕೆ ಅವಶ್ಯಕ ಅನುದಾನ ಪುಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಕೋರಲಾಗಿದೆ.

Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.