ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರಿಯಿಡಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಏರಿಯಾಗಳಲ್ಲಿ ಅವಾಂತರ ಸೃಷ್ಟಿಯಾಗಿದೆ. ಕೆ.ಆರ್.ಪುರಂನ ಭೀಮಯ್ಯ ಲೇಔಟ್ ಸಂಪೂರ್ಣ ಜಲಾವೃತವಾಗಿದೆ. ರಾಜಕಾಲುವೆ ಸರಿಯಾದ ನಿರ್ವಹಣೆ ಮಾಡದಿದ್ದರಿಂದ ಅವಾಂತರವಾಗಿದೆ.
ಎಲೆಕ್ಟ್ರಾನಿಕ್ ಸಿಟಿಯ ನಿಲಾದ್ರಿನಗರದಲ್ಲಿ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೊಸ ರೋಡ್ ಸೇರಿದಂತೆ ಹಲವೆಡೆ ರಸ್ತೆಗಳು ಜಲಾವೃತವಾಗಿವೆ. ಕೆ.ಆರ್. ಮಾರುಕಟ್ಟೆಯಲ್ಲಿ ಭಾರೀ ಮಳೆಯಿಂದಾಗಿ ಹೂವಿನ ರಾಶಿ ಕೊಚ್ಚಿಕೊಂಡು ಹೋಗಿದ್ದು, ಹಲವು ವಾಹನಗಳು ನೀರಿನಲ್ಲಿ ಮುಳುಗಿವೆ.