ನವದೆಹಲಿ: ರಾಹುಲ್ ಗಾಂಧಿ ಮತ್ತು 2025 ರ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ಕೊರಿನಾ ಮಚಾಡೊ ನಡುವೆ ಸಾಮ್ಯತೆ ಇದೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಕೂಡ ದೇಶದಲ್ಲಿ ಸಂವಿಧಾನವನ್ನು ಉಳಿಸಲು ಹೋರಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಸುರೇಂದ್ರ ಸಿಂಗ್ ರಜಪೂತ್ ಶುಕ್ರವಾರ ಹೇಳಿದ್ದಾರೆ.
2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನಿಜುವೆಲಾದ ವಿರೋಧ ಪಕ್ಷದ ನಾಯಕರಿಗೆ ನೀಡಲಾಗಿದೆ ಎಂದು ರಜಪೂತ್ ಹೇಳಿದ್ದಾರೆ.
“ಸಂವಿಧಾನವನ್ನು ರಕ್ಷಿಸಿದ್ದಕ್ಕಾಗಿ ಈ ವರ್ಷದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನಿಜುವೆಲಾದ ವಿರೋಧ ಪಕ್ಷದ ನಾಯಕರಿಗೆ ನೀಡಲಾಗಿದೆ. ಭಾರತದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡ ದೇಶದ ಸಂವಿಧಾನವನ್ನು ಉಳಿಸಲು ಹೋರಾಡುತ್ತಿದ್ದಾರೆ” ಎಂದು ಕಾಂಗ್ರೆಸ್ ನ ರಾಷ್ಟ್ರೀಯ ಮಾಧ್ಯಮ ಪ್ಯಾನೆಲಿಸ್ಟ್ ಸದಸ್ಯ ರಜಪೂತ್ ಹೇಳಿದ್ದಾರೆ.