ಬೆಂಗಳೂರು : ಬೆಂಗಳೂರಿನಲ್ಲಿ ಹೃದಯಾಘಾತದಿಂದ ಬಿಎಂಟಿಸಿ ಬಸ್ ಚಾಲಕರೊಬ್ಬರು ಸಾವನಪ್ಪಿದ್ದಾರೆ. ದೇವನಹಳ್ಳಿಯ ಬಿಎಂಟಿಸಿ ಬಸ್ ಡಿಪೋದಲ್ಲಿ ಈ ಒಂದು ಘಟನೆ ನಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ 50ನೇ ಬಸ್ ಡಿಪೋದಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಮೂಲದ ನಾರಾಯಣಪ್ಪ ಸಾವನಪ್ಪಿದ್ದಾರೆ. ಕಳೆದ ರಾತ್ರಿ ಕೆಲಸ ಮುಗಿಸಿ ಬಸ್ ಸಮೇತ ಅವರು ಡಿಪೋಗೆ ಬಂದಿದ್ದರು. ಬಸ ನಿಲ್ಲಿಸುತ್ತಿದ್ದಂತೆ ನಾರಾಯಣಪ್ಪಗೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅಲ್ಲಿಯೇ ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ.