ಬೆಂಗಳೂರು : ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ ನನಗೆ ನನ್ನ ಗುರಿ ಗೊತ್ತಿದೆ ನನಗೆ ಯಾವ ಆತುರವೂ ಇಲ್ಲ. ಈ ರೀತಿ ಹೇಳುವ ಅವಶ್ಯಕತೆಯೂ ಇಲ್ಲ ಜನರು ಭೇಟಿಗೆ ಬಂದಾಗ ಕೆಲವರು ಸಿಎಂ ಆಗಬೇಕು ಅಂತಾರೆ ನಾನು ಮುಖ್ಯಮಂತ್ರಿ ಹುದ್ದೆ ಅಲಂಕರಿಸಲು ಆತುರದಲ್ಲೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ಸೇವೆ ಮಾಡಲು ಹಗಲು-ರಾತ್ರಿ ತಿರುಗುತ್ತಿದ್ದೇನೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನ ಕೊಡಲಿ. ರಾಜ್ಯದ ಜನರ ಸೇವೆಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಹೋಂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.