ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಸಜ್ಜಾ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಮೂಲದ ಇಬ್ಬರು ಕೂಲಿಕಾರ್ಮಿಕರು ಸಾವನಪ್ಪಿದ್ದಾರೆ. ಬೆಂಗಳೂರಿನ ಬೆಳ್ಳಂದೂರಿನಲ್ಲಿ ಈ ಒಂದು ಘಟನೆ ನಡೆದಿದ್ದು ಅಮೀರ್ ಹುಸೇನ್ (33) ಹಾಗೂ ಮಮ್ತಾಜ್ ಅಲಿ (28)ಸಾವನಪ್ಪಿದ್ದಾರೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದ ವೇಳೆ ಏಕಾಏಕಿಯಾಗಿ ಸಜ್ಜ ಕುಸಿದು ಬಿದ್ದಿದೆ. 13ನೇ ಫ್ಲೋರ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ , ಇಂಪಿರಿಯಲ್ ಬಿಲ್ಡ್ ಟೆಕ್ ಪಾರ್ಕ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಈ ಕುರಿತು ಕೇಸ್ ಸಹ ದಾಖಲಾಗಿದ್ದು, ಪೊಲೀಸರು ಪ್ರಕರಣ ಘಟನೆಗೆ ಸಂಬಂಧಿಸಿದಂತೆ 6 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಕೇಸ್ ಕೂಡ ದಾಖಲಾಗಿದೆ.