ಬಳ್ಳಾರಿ : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಈಗಾಗಲೇ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅಕ್ಟೋಬರ್ 13 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿತ್ತು.ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.