ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಕೃತ್ಯ ನಡೆದಿದ್ದು, ಬೆಂಗಳೂರಲ್ಲಿ ಅಪಾರ್ಟ್ಮೆಂಟ್ ನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ಹೊರವಲಯದಲ್ಲಿರುವ ಅಪಾರ್ಟ್ಮೆಂಟಲ್ಲಿ ಈ ಒಂದು ಕೃತ್ಯ ನಡೆದಿದ್ದು, ಬಾಲಕೀಯ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ.
ಅಪಾರ್ಟ್ಮೆಂಟ್ ನಿವಾಸಿ ಪರಿಚಿತನಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ತನ್ನ ಮೇಲೆ ನಡೆದ ಲೈಂಗಿಕ ದೋಷದಿಂದ ಬಗ್ಗೆ ಬಾಲಕಿ ತಾಯಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ಅಪಾರ್ಟ್ಮೆಂಟ್ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಪೊಲೀಸರು ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ ಜೈಲಿಗೆ ಅಟ್ಟಿದ್ದಾರೆ.